ಮಂಗಳೂರು : ಮಹಾತ್ಮಾಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ.
ಮೇ 19 ನಾಥೂರಾಮ್ ಗೋಡ್ಸೆ ಜನ್ಮದಿನವಾಗಿದ್ದು, ದೇಶಭಕ್ತನ ಹೆಸರಿನಲ್ಲಿ ಮಹಾತ್ಮಗಾಂಧಿ ಹಂತಕ ನಾಥೂರಾಮ್ ವಿನಾಯಕ ಗೋಡ್ಸೆ ಅವರ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಶ್ರಯದಲ್ಲಿ ಇದನ್ನು ಆಚರಿಸುವ ಮೂಲಕ ವಿವಾದ ಸೃಷ್ಟಿಸಲಾಗಿದೆ.
ಅಹಿಂಸಾವಾದಿ, ರಾಷ್ಟ್ರಪಿತ ಎಂದು ಇಡೀ ದೇಶದ ಜನತೆ ಗೌರವಿಸುವ ಮಹಾತ್ಮಾಗಾಂಧಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಇದೀಗ ಕೆಲವು ಹಿಂದೂ ಸಂಘಟನೆಗಳು ವೈಭವೀಕರಿಸುತ್ತಿದ್ದು, ಆತನ ಜನ್ಮ ದಿನವನ್ನೂ ಆಚರಿಸುತ್ತಿದ್ದಾರೆ. ಮಂಗಳೂರಿನಲ್ಲೂ ನಾಥೂರಾಮ್ ಗೋಡ್ಸೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆತನನ್ನು ಮಹಾನ್ ದೇಶಭಕ್ತ ಎಂದು ಬಿಂಬಿಸಲಾಗಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯ ಅಧ್ಯಕ್ಷ ಎಲ್ ಕೆ ಸುವರ್ಣ,ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮೊದಲಾದವರಿದ್ದರು. ಮಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಯಕ್ರಮ ಆಯೋಜಿಸಿದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಗ್ರಹ ವ್ಯಕ್ತವಾಗಿದೆ.
ಉಳ್ಳಾಲದಲ್ಲಿನ ಹಿಂದೂ ಮಹಾಸಭಾದ ಸದಸ್ಯರೊಬ್ಬರ ಮನೆಯಲ್ಲಿ ನಾಥೂರಾಮ್ ಗೋಡ್ಸೆ ಅವರ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೆೃಯುವ ಮೂಲಕ ಆಚರಿಸಲಾಗಿದ್ದು.ಈ ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಅಧ್ಯಕ್ಷ ಎಲ್.ಕೆ ಸುವಣ೯, ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಾಗೂ ಲೋಕೇಶ್ ಮತ್ತಿತ್ತರ ಕಾರ್ಯಕರ್ತರು ಭಾಗವಹಿಸಿದ್ದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…