Featured

ನಾಥೂರಾಮ್ ಗೋಡ್ಸೆ ಜನ್ಮದಿನಾಚರಣೆ ಆಚರಿಸಿದ ಅಖಿಲ ಭಾರತ ಹಿಂದೂ ಮಹಾಸಭಾ -Vishwanews24

ಮಂಗಳೂರು : ಮಹಾತ್ಮಾಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ.
ಮೇ 19 ನಾಥೂರಾಮ್ ಗೋಡ್ಸೆ ಜನ್ಮದಿನವಾಗಿದ್ದು, ದೇಶಭಕ್ತನ ಹೆಸರಿನಲ್ಲಿ ಮಹಾತ್ಮಗಾಂಧಿ ಹಂತಕ ನಾಥೂರಾಮ್ ವಿನಾಯಕ ಗೋಡ್ಸೆ ಅವರ ಜನ್ಮದಿನವನ್ನು ಮಂಗಳೂರಿನಲ್ಲಿ ಆಚರಿಸಲಾಗಿದೆ.

ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಶ್ರಯದಲ್ಲಿ ಇದನ್ನು ಆಚರಿಸುವ ಮೂಲಕ ವಿವಾದ ಸೃಷ್ಟಿಸಲಾಗಿದೆ.

ಅಹಿಂಸಾವಾದಿ, ರಾಷ್ಟ್ರಪಿತ ಎಂದು ಇಡೀ ದೇಶದ ಜನತೆ ಗೌರವಿಸುವ ಮಹಾತ್ಮಾಗಾಂಧಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಇದೀಗ ಕೆಲವು ಹಿಂದೂ ಸಂಘಟನೆಗಳು ವೈಭವೀಕರಿಸುತ್ತಿದ್ದು, ಆತನ ಜನ್ಮ ದಿನವನ್ನೂ ಆಚರಿಸುತ್ತಿದ್ದಾರೆ. ಮಂಗಳೂರಿನಲ್ಲೂ ನಾಥೂರಾಮ್ ಗೋಡ್ಸೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆತನನ್ನು ಮಹಾನ್ ದೇಶಭಕ್ತ ಎಂದು ಬಿಂಬಿಸಲಾಗಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯ ಅಧ್ಯಕ್ಷ ಎಲ್ ಕೆ ಸುವರ್ಣ,ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮೊದಲಾದವರಿದ್ದರು. ಮಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಯಕ್ರಮ ಆಯೋಜಿಸಿದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಗ್ರಹ ವ್ಯಕ್ತವಾಗಿದೆ.

ಉಳ್ಳಾಲದಲ್ಲಿನ ಹಿಂದೂ ಮಹಾಸಭಾದ ಸದಸ್ಯರೊಬ್ಬರ ಮನೆಯಲ್ಲಿ ನಾಥೂರಾಮ್ ಗೋಡ್ಸೆ ಅವರ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೆೃಯುವ ಮೂಲಕ‌ ಆಚರಿಸಲಾಗಿದ್ದು.ಈ ಕಾರ್ಯಕ್ರಮದಲ್ಲಿ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಅಧ್ಯಕ್ಷ ಎಲ್.ಕೆ ಸುವಣ೯, ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಾಗೂ ಲೋಕೇಶ್ ಮತ್ತಿತ್ತರ ಕಾರ್ಯಕರ್ತರು ಭಾಗವಹಿಸಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

8 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

9 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago