Featured

ನಾನು‌ ನನ್ನ ಕೆಲಸ ಮಾಡುತ್ತಿದ್ದೇನೆ , ಯಾವುದೇ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ : ಮುಖ್ಯಮಂತ್ರಿ ಬಿ ಎಸ್‌ ವೈ -Vishwanews24

ಬೆಂಗಳೂರು: ಯಾವುದೇ ಟೀಕೆಗಳು ಬಂದರೂ ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಮತ್ತು ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರ ಸಹಿಸಲ್ಲ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಕುಮಾರಸ್ವಾಮಿ ಟ್ವೀಟ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾನು‌ ನನ್ನ ಕೆಲಸ ಮಾಡುತ್ತಿದ್ದೇನೆ. ಟೀಕೆಗಳು ಬರುತ್ತವೆ. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಹೇಳಿಕೆಗಳಿಗೆಲ್ಲ ಪ್ರತಿಕ್ರಿಯೆ ಕೊಡಬಾರದೆಂದು ನಿರ್ಧಾರ ಮಾಡಿದ್ದೇನೆ‌ ಎಂದು ಹೇಳಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರ ಸಹಿಸಲ್ಲ. ಇದರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಬೇಕು. ಸಾರ್ವಜನಿಕರು ನನ್ನ ಗಮನಕ್ಕೆ ತಂದರೆ ಮುಲಾಜಿಲ್ಲದೇ ಭ್ರಷ್ಟಾಚಾರದ ವಿರುದ್ದ ಕ್ರಮ ಕೈಗೊಳ್ಳುವೆ ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅಭಿವೃದ್ಧಿ ವಿಚಾರವಾಗಿ ಬೆಂಗಳೂರಿನ ಸಂಸದರು, ಶಾಸಕರು ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುತ್ತೇವೆ. ಬೆಂಗಳೂರು ವಿಶ್ವ ದರ್ಜೆಯ ನಗರ ಮಾಡುವ ಗುರಿ ನಮಗಿದೆ. ಸದ್ಯದಲ್ಲೇ ಐಟಿಬಿಟಿ ಕಂಪನಿಗಳ ಸಭೆ ಕರೆಯುತ್ತೇನೆ. ನಗರದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳುವೆ. ಕಾರವಾರಕ್ಕೆ ತೆರಳಿ ಅತಿವೃಷ್ಟಿ ಬಗ್ಗೆ ಮಾಹಿತಿ ಪಡೆಯುವೆ. ಕೇಂದ್ರದಿಂದ ಹೆಚ್ಚಿನ ಅನುದಾನ ಸಿಗುವ ಭರವಸೆ ಇದೆ ಎಂದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

22 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago