ನಾನು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟುಕೊಂಡಿದ್ದೇನೆ ಎಂಬ ಅನುಮಾನವಿದ್ದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನನ್ನ ಮನೆ ಮೇಲೂ ದಾಳಿ ಮಾಡಲಿ : ಪ್ರಧಾನಿ ಮೋದಿ -Vishwanews24

Featured, ರಾಷ್ಟ್ರ ನ್ಯೂಸ್

ಮಧ್ಯಪ್ರದೇಶ,: ನಾನು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟುಕೊಂಡಿದ್ದೇನೆ ಎಂಬ ಅನುಮಾನವಿದ್ದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನನ್ನ ಮನೆ ಮೇಲೂ ದಾಳಿ ಮಾಡಲಿ, ಇದನ್ನು ವಿರೋಧಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಧ್ಯಪ್ರದೇಶದ ಸಿಧಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ. ನಾನು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿದ್ದೇನೆ ಎಂದಾದರೆ ನನ್ನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲಿ, ಇದನ್ನು ನಾನು ವಿರೋಧಿಸುವುದಿಲ್ಲ ಎಂದರು.

ಆದಾಯ ತೆರಿಗೆ ದಾಳಿ ನಂತರ ಕಾಂಗ್ರೆಸ್ ಮುಖಂಡರು ಹೇಳುತ್ತಾರೆ, ನಾವು ಜನಪ್ರತಿನಿಧಿಗಳು, ಹೀಗಾಗಿ ಯಾಕೆ ನಮ್ಮ ಮನೆ, ಕಚೇರಿ ಮೇಲೆ ದಾಳಿ ನಡೆಸಬೇಕು ಅಂತ..? ದೇಶದ ಕಾನೂನು ಎಲ್ಲರಿಗೂ ಒಂದೇ. ಒಂದು ವೇಳೆ ಮೋದಿ ಏನಾದರೂ ತಪ್ಪು ಮಾಡಿದರೂ ಕೂಡಾ ಮೋದಿ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲೇಬೇಕು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ವೇಳೆ ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಪ್ರತಿಪಕ್ಷಗಳ ನಾಯಕರು ಮತ್ತವರ ಆಪ್ತರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ.