ಮಧ್ಯಪ್ರದೇಶ,: ನಾನು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟುಕೊಂಡಿದ್ದೇನೆ ಎಂಬ ಅನುಮಾನವಿದ್ದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನನ್ನ ಮನೆ ಮೇಲೂ ದಾಳಿ ಮಾಡಲಿ, ಇದನ್ನು ವಿರೋಧಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ಸಿಧಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ. ನಾನು ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿದ್ದೇನೆ ಎಂದಾದರೆ ನನ್ನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲಿ, ಇದನ್ನು ನಾನು ವಿರೋಧಿಸುವುದಿಲ್ಲ ಎಂದರು.
ಆದಾಯ ತೆರಿಗೆ ದಾಳಿ ನಂತರ ಕಾಂಗ್ರೆಸ್ ಮುಖಂಡರು ಹೇಳುತ್ತಾರೆ, ನಾವು ಜನಪ್ರತಿನಿಧಿಗಳು, ಹೀಗಾಗಿ ಯಾಕೆ ನಮ್ಮ ಮನೆ, ಕಚೇರಿ ಮೇಲೆ ದಾಳಿ ನಡೆಸಬೇಕು ಅಂತ..? ದೇಶದ ಕಾನೂನು ಎಲ್ಲರಿಗೂ ಒಂದೇ. ಒಂದು ವೇಳೆ ಮೋದಿ ಏನಾದರೂ ತಪ್ಪು ಮಾಡಿದರೂ ಕೂಡಾ ಮೋದಿ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲೇಬೇಕು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯ ವೇಳೆ ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಪ್ರತಿಪಕ್ಷಗಳ ನಾಯಕರು ಮತ್ತವರ ಆಪ್ತರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…