ಮೈಸೂರು: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಾರಾ ಮಹೇಶ್ ಕಣಕ್ಕೆ ಇಳಿಯುತ್ತಾರೆ ಎಂಬ ಮಾತು ಕಳೆದ ನಾಲ್ಕು ದಿನಗಳಿಂದ ದಟ್ಟವಾಗಿ ಶುರುವಾಗಿತ್ತು. ಈ ಹಬ್ಬಿದ ವೇಗದಲ್ಲೇ ಈ ಮಾತನ್ನು ಖುದ್ದು ಸಾರಾ ಮಹೇಶ್ ಕಡಿಮೆ ಮಾಡುವ ಮಾತಾಡಿದ್ದಾರೆ. ಅಷ್ಟು ಮಾತ್ರವಲ್ಲ ತಮಗೆ ಚುನಾವಣಾ ರಾಜಕೀಯವೇ ಸಾಕಾಗಿದೆ ಎಂಬ ರೀತಿ ವೈರಾಗ್ಯದ ಮಾತನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಲೋಕಸಭಾ ಚುನಾವಣೆಯ ಆಕಾಂಕ್ಷಿಯಲ್ಲ. ನಾನು ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ. ನನಗೆ ರೆಸ್ಟ್ ಬೇಕಿದೆ. ಹೀಗಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ವಿಧಾನಸಭಾ ಚುನಾವಣೆಯ ಸೋಲು ತಮ್ಮನ್ನು ಮಾನಸಿಕವಾಗಿ ಕುಗ್ಗಿಸಿದೆ ಎಂಬುದನ್ನು ಬಹಿರಂಗವಾಗಿಯೆ ಒಪ್ಪಿಕೊಂಡಿದ್ದಾರೆ.
ಇದೇ ವೇಳೆ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಬೇಕು. ಸಂಸದ ಪ್ರತಾಪ್ ಸಿಂಹ 10 ವರ್ಷ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಮುಖಂಡರು ನನ್ನ ಅಭ್ಯರ್ಥಿಯಾಗುವ ವಿಚಾರದಲ್ಲಿ ಸಂಪರ್ಕಿಸಿದ್ದಾರೆ ಎಂಬುದೆಲ್ಲಾ ಊಹಾಪೋಹ ಎನ್ನುವ ಮೂಲಕ ಪ್ರತಾಪ್ ಸಿಂಹ ಪರವೂ ಬ್ಯಾಟ್ ಬೀಸಿದ್ದಾರೆ.
ಸದ್ಯಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದಲ್ಲಿ ಊಹಾಪೋಹಗಳದ್ದೇ ಕಾರುಬಾರು. ಆದ್ರೆ ಸಾರಾ ಮಹೇಶ್ ಬ್ರೇಕ್ ಹಾಕಿ ಗಾಸಿಪ್‍ಗಳು ಹುಟ್ಟುವುದನ್ನು ಕಡಮೆ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…