Featured

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಸಂಸದ ಪ್ರತಾಪ ಸಿಂಹ – Vishwanews24

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರು ಬದಲಾಯಿಸಿದ್ದೇನೆ: ಪ್ರತಾಪ ಸಿಂಹ

ಮೈಸೂರು: ‘ ಭಾರತದ ಇತಿಹಾಸದಲ್ಲಿ ಒಂದು ರೈಲಿಗೆ ಹೆಸರನ್ನು ಇಡಲಾಗಿದೆ ಹೊರತು ಅದನ್ನು ಬದಲಾಯಿಸಿರುವ ಉದಾಹರಣೆ ಇಲ್ಲ, ಆದರೆ ನಾನೇ ಮೊದಲ ಬಾರಿಗೆ ರೈಲಿಗೆ ಇಟ್ಟ ಹೆಸರನ್ನು ಬದಲಾಯಿಸಿದ್ದೇನೆ’ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲಿನ ಹೆಸರನ್ನು ತೆಗೆಸುತ್ತಿದ್ದೇನೆ. ಟಿಪ್ಪು ಕೊಡುಗೆ ಮೈಸೂರಿಗೆ ಏನು? ಹೆಸರನ್ನು ಬದಲಾಯಿಸಬಾರದು ಎಂದು ಹೇಳುವವರು ಟಿಪ್ಪು ಮೈಸೂರಿಗೆ ನೀಡಿದ ಮೂರು ಸಾಧನೆಯನ್ನು ತಿಳಿಸಲಿ’ ಎಂದು ಸವಾಲು ಹಾಕಿದರು.

‘ಮೈಸೂರಿಗೆ ಒಡೆಯರ್ ಅವರು ನೀಡಿದ ನೂರು ಸಾಧನೆಯನ್ನು ನಾನು ಹೇಳಬಲ್ಲೆ, ಆದರೆ ಟಿಪ್ಪು ಸಾಧನೆ ಏನು? ಆತ ಮೈಸೂರಿನವನ? ಟಿಪ್ಪು ಶ್ರೀರಂಗಪಟ್ಟಣದವನು. ಹಾಗಿದ್ದ ಮೇಲೆ ಮೈಸೂರು ರೈಲಿಗೆ ಟಿಪ್ಪು ಹೆಸರನ್ನು ಏಕೆ ಇಡಬೇಕು’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್ – Vishwanews24

‘ಕೆಲವರು ಹೊಸ ರೈಲನ್ನು ತರಬಹುದಿತ್ತು ಎಂದು ಹೇಳುತ್ತಿದ್ದಾರೆ. 2014 ರಲ್ಲಿ ಮೈಸೂರಿನಿಂದ ವಾರಣಾಸಿಗೆ ತಂದ ರೈಲಿನಿಂದ ಹಿಡಿದು ಕಾಚಿಗೂಡ ಎಕ್ಸ್ ಪ್ರೆಸ್, ಕೋಚುವೆಲ್, ಚೆನ್ನೈ ಎಕ್ಸ್ ಪ್ರೆಸ್, ಉದಯ್ ಪುರ ರೈಲು, ವಿಶ್ವಮಾನವ ರೈಲು ಸೇರಿದಂತೆ ಹತ್ತು ರೈಲುಗಳನ್ನು ಮೈಸೂರಿಗೆ ತಂದಿದ್ದೇನೆ. ಇಷ್ಟು ಕಡಿಮೆ ಅವಧಿಯಲ್ಲಿ ದೇಶದ ಯಾವ ಸಂಸದರೂ ಇಷ್ಟೊಂದು ರೈಲನ್ನು ಅವರ ಕ್ಷೇತ್ರಕ್ಕೆ ತಂದಂತಹ ಉದಾಹರಣೆ ಇಲ್ಲ, ಹೊಸ ರೈಲುಗಳನ್ನು ತರುವ ಜೊತೆಗೆ ರೈಲಿನ ಹೆಸರನ್ನು ನಾನು ಬದಲಾಯಿಸಿದ್ದೇನೆ. ಉದ್ದೇಶಪೂರ್ವಕವಾಗಿಯೇ ಟಿಪ್ಪು ರೈಲನ್ನು ಬದಲಾಯಿಸಿದ್ದು ಎಂಬುದಕ್ಕೆ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ’ ಎಂದು ಹೇಳಿದರು.

‘ಈಗಾಗಲೇ ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ರದ್ದು ಮಾಡಲಾಗಿದೆ. ಅದೇ ರೀತಿ ರೈಲಿಗೆ ಇಟ್ಟಿದ್ದ ಹೆಸರನ್ನು ಬದಲಾಯಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ’ ಎಂದರು.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

8 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

8 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

8 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

9 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

9 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

9 hours ago