ನಾನು ಒಬ್ಬ ಕೂಲಿ ಕಾರ್ಮಿಕ, ಕಾರ್ಮಿಕರ ಪಾಡು ಬಹಳ ಹತ್ತಿರದಿಂದ ತಿಳಿದುಕೊಂಡಿದ್ದೇನೆ : ಸಚಿವ ಎಸ್. ಅಂಗಾರ -Vishwanews24
ಕುಂಭಾಸಿ: ನಾನು ಒಬ್ಬ ಕೂಲಿ ಕಾರ್ಮಿಕ, ಕಾರ್ಮಿಕರ ಪಾಡು ಬಹಳ ಹತ್ತಿರದಿಂದ ತಿಳಿದುಕೊಂಡಿದ್ದೇನೆ : ಸಚಿವ ಎಸ್. ಅಂಗಾರ -Vishwanews24
ಕರಾವಳಿ ಭಾಗದ ಕಡಲ್ಕೊರೆತ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಕ್ರಮ..
ಕುಂಭಾಸಿ: ನಾನು ಒಬ್ಬ ಕೂಲಿ ಕಾರ್ಮಿಕ. ಕೂಲಿ ಕೆಲಸ ಮಾಡಿ ನನಗೆ ಅನುಭವವಿದೆ. ಕಾರ್ಮಿಕರ ಪಾಡು ಬಹಳ ಹತ್ತಿರದಿಂದ ತಿಳಿದುಕೊಂಡಿದ್ದೇನೆ. ಇಂತಹ ಕಾಲಘಟ್ಟದಲ್ಲಿ ಕಾರ್ಮಿಕರ ಸಂಕಷ್ಟವನ್ನು ಅರಿತುಕೊಂಡು ಮೀನುಗಾರ ಕಾರ್ಮಿಕರಿಗೆ ನ್ಯಾಯೋಚಿತವಾಗಿ ಬೆಂಬಲ ನೀಡುವ ಕೆಲಸಗಳನ್ನು ಮಾಡುತ್ತೇನೆ ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.
ಕುಂಭಾಸಿ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೀನುಗಾರಿಕೆ ಉದ್ಯಮಕ್ಕೆ ಸಂಬಂಧಪಟ್ಟಂತೆ ಯಾವುದೇ ಪ್ರೊಡಕ್ಟ್ ಮತ್ತು ಮೀನುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಮಾಡಲು ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ನೇರವಾಗಿ ವ್ಯವಹರಿಸಲು ಇಲಾಖೆ ಮುಂದಿನ ದಿನದಲ್ಲಿ ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.
ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಕ್ರಮ: ಕರಾವಳಿ ಭಾಗದ ಕಡಲ್ಕೊರೆತ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್ಗಳ ಜತೆ ಚರ್ಚಿಸಿ ಅನಿವಾರ್ಯ ಪರಿಸ್ಥಿತಿ ಇರುವ ಸ್ಥಳವನ್ನು ಗುರುತಿಸಿ ತಾಂತ್ರಿಕತೆಯನ್ನು ಬಳಸಿಕೊಂಡು ತುರ್ತು ತಡೆಗೋಡೆ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಇದೇ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲಿ ತನಕ ಬಂದಿಲ್ಲ. ಮುಖ್ಯಮಂತ್ರಿಗಳ ಆದೇಶದಂತೆ ಯಾವುದಕ್ಕೂ ಚ್ಯುತಿ ಬಾರದ ಹಾಗೇ ನ್ಯಾಯ ಮತ್ತು ಬದ್ಧತೆಯಿಂದ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.
ನೂತನ ಸಚಿವರನ್ನು ಪಂಚ್ಯವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ದೇವಳದ ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಹಾಗೂ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಮಾಡಿ ದೇವಳ ವತಿಯಿಂದ ಶಾಲು ಹೊದಿಸಿ ಗೌರವಿಸಿದರು.
ರೈತರ ಹೋರಾಟ : ಸಾವು-ನೋವುಗಳು ಸಂಭವಿಸುತ್ತಿರುವುದು ನಿಜಕ್ಕೂ ದುಖದ ಸಂಗತಿ : ಸಚಿವ ಯು.ಟಿ.ಖಾದರ್ -Vishwanews24
