Featured

ನಾನು ಓಪನ್ ಹಾರ್ಟೆಡ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ : ಜಮೀರ್ ಅಹಮ್ಮದ್ – Vishwanews24

ನಾನು ಓಪನ್ ಹಾರ್ಟೆಡ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ : ಜಮೀರ್ ಅಹಮ್ಮದ್ – Vishwanews24

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ನಾನು ಈಗ ಏನು ಹೇಳಲ್ಲ. ನಾನು ಓಪನ್ ಹಾರ್ಟೆಡ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, ನಮ್ಮ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಚರ್ಚೆಗೆ ಫುಲ್ ಸ್ಟಾಪ್ ಹಾಕಿ ಎಂದಿದ್ದಾರೆ. ಹಾಗಾಗಿ ಹೇಳಿಕೆಗೆ ಟೋಟಲಿ ಫುಲ್ ಸ್ಟಾಪ್ ಹಾಕಿದ್ದೀನಿ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ನಾನು ನನ್ನ ಅಭಿಪ್ರಾಯ ಹೇಳಿದ್ದೀನಿ. ಸಿದ್ದರಾಮಯ್ಯ ಅವರ ಸರ್ಕಾರದ ಕೆಲಸವನ್ನು ಜನ ನೆನಪಿಸಿಕೊಳ್ತಾರೆ. ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ ಎಂದರು.

ನಮ್ಮಲ್ಲಿ ಸಾಕಷ್ಟು ಜನ ಮುಖ್ಯಮಂತ್ರಿ ಪಟ್ಟಕ್ಕೆ ಅರ್ಹರಿದ್ದಾರೆ. ಯಾರು ಸಿಎಂ ಆಗಬೇಕು ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಜನರ ಅಭಿಪ್ರಾಯ ಯಾರ ಪರವಾಗಿ ಇದೆ ಅವರು ಆಗುತ್ತಾರೆ. ನಮಗೆ ನಮ್ಮ ನಾಯಕ ಸಿದ್ದರಾಮಯ್ಯ ಮಾತನಾಡಬೇಡಿ ಎಂದಿದ್ದಾರೆ. ಹಾಗಾಗಿ ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಸಿಎಂ ಸ್ಥಾನದ ಬಗ್ಗೆ ಹಲವರು ಹೇಳ್ತಿದ್ದಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಎಂದು ಎಂ.ಬಿ ಪಾಟೀಲ್ ಹೇಳ್ತಾರೆ. ಅಲ್ಪಸಂಖ್ಯಾತರಲ್ಲಿ ಸಿ.ಎಂ ಇಬ್ರಾಹಿಂ ಕೊಡಿ ಅಂತಾರೆ. ತನ್ವೀರ್ ಸೇಠ್ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದಿದ್ದಾರೆ. ಯಾರು ಸಿಎಂ ಆಗಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸಲಿದೆ ಎಂದು ಅಭಿಪ್ರಾಯಪಟ್ಟರು.

Vishwa News 24

Recent Posts

ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು -vishwanews24

ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು ಸುಳ್ಯ : ಕಾರು ಮತ್ತು ಬೈಕ್ ಅಪಘಾತವಾಗಿ ಬೈಕ್…

13 hours ago

ನ.29ರಂದು ಉಡುಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ -vishwanews24

ನ.29ರಂದು ಉಡುಪಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಉಡುಪಿ : ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ…

15 hours ago

ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು -vishwanews24

ಉಡುಪಿ: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ರಾಜೇಶ್ ಕೇಶವ ಆಚಾರ್ಯ ಯುಎಎಇ ಯಿಂದ ಭಾರತಕ್ಕೆ ಗಡಿಪಾರು ಮುಂಬೈ ವಿಮಾನ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್‌ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ…

1 day ago

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ -vishwanews24

ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲೇ…

2 days ago

ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ -vishwanews24

 ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ಈಗಾಗಲೇ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಂಗಳೂರು:…

2 days ago