ನಾನು ಗೆದ್ದ ನಂತರ ವಿಜಯೇಂದ್ರ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ : ಈಶ್ವರಪ್ಪ ಭವಿಷ್ಯ – Vishwanews24
ನಾನು ಗೆದ್ದ ನಂತರ ವಿಜಯೇಂದ್ರ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ : ಈಶ್ವರಪ್ಪ ಭವಿಷ್ಯ
ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನ ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಪಾಯಕಾರಿ ಶ್ವಾನ ತಳಿಗಳ ನಿಷೇಧಿಸಿದ ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ – Vishwanews24
ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ
