ಬೆಂಗಳೂರು : ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಹುಟ್ಟಾ ಕಾಂಗ್ರೆಸಿಗ. ಆದರೂ, ನನ್ನ ವೈಯಕ್ತಿಕ ನಂಬಿಕೆ ನಾನು ಪಾಲಿಸುತ್ತೇನೆ. ನಾನು ಎಲ್ಲ ಧರ್ಮವನ್ನೂ ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ನಾನು ಜನ್ಮತಃ ಹಿಂದುವಾಗಿದ್ದು, ಹಿಂದುವಾಗಿಯೇ ಜೀವಿಸಿ, ಹಿಂದುವಾಗಿಯೇ ಸಾಯುತ್ತೇನೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇಶಾ ಫೌಂಡೇಷನ್‌ನ ಸದ್ಗುರು ಜಗ್ಗಿ ವಾಸುದೇವ ಅವರು ಶಿವರಾತ್ರಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಭೇಟಿಯಾಗಿದ್ದರು. ಅದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಪಾಲ್ಗೊಳ್ಳುತ್ತಿದ್ದಾರೆ. ಹಾಗೆಯೇ ನಾನು ಇತ್ತೀಚೆಗೆ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡಿದ್ದೆ. ಈ ಎಲ್ಲ ಕಾರಣದಿಂದಾಗಿ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು ಎಂದು ಹೇಳಿದರು.
ದೆಹಲಿ ಪ್ರವಾಸದ ವೇಳೆ ಎಐಸಿಸಿ ಕಚೇರಿ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ. ಎಐಸಿಸಿ ಕಚೇರಿ ನನಗೆ ದೇವಸ್ಥಾನವಿದ್ದಂತೆ. ಯಾವುದೇ ನಾಯಕರನ್ನೂ ಭೇಟಿ ಮಾಡದಿದ್ದರೂ ಎಐಸಿಸಿ ಕಚೇರಿಗೆ ಹೋಗಿ ಬರುತ್ತೇನೆ. ಆ ಕಚೇರಿಯೇ ನನ್ನನ್ನು ಈ ಸ್ಥಾನದಲ್ಲಿ ಕೂರಿಸಿದೆ. ನಾನು ಕಾಂಗ್ರೆಸ್ ಕಚೇರಿಗೆ ಹೋಗದೆ ಬಿಜೆಪಿ ಕಚೇರಿಗೆ, ಕೇಶವ ಕೃಪಕ್ಕೆ ಹೋಗಲು ಸಾಧ್ಯವೇ? ಎಂದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…