Featured

ನಾನು ಜಾತಿಗಳನ್ನು ಒಡೆಯುತ್ತೇನೆಂದು ಅಪಪ್ರಚಾರ ಮಾಡಿ ಸೋಲಿಸಿ ಬಿಟ್ಟರು: ಸಿದ್ದರಾಮಯ್ಯ

ಬೆಂಗಳೂರು :ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೊದಲ ಬಾರಿಗೆ ಚುನಾವಣೆಯಲ್ಲಿ ಸೋತ ಕುರಿತಾದಂತೆ ತಮ್ಮ ಸಮುದಾಯದ ವೇದಿಕೆಯಲ್ಲಿ ಮಾತನಾಡಿದರು. “ನಾನು ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿದ್ದೇನೆ, ಜಾತಿಗಳನ್ನು ಒಡೆಯುತತಿದ್ದೇನೆ ಎಂದು ಅಪಪ್ರಚಾರ ಮಾಡಿದರು. ಕೊನೆಗೆ ನಮ್ಮನ್ನು ಸೋಲಿಸಿಯೇ ಬಿಟ್ಟರು. ಇನ್ನು ಸಾಮಾಜಿಕ ನ್ಯಾಯದಿಂದ ವಂಚಿತರಾದ ಯಾರು ಕೂಡಾ ನಮ್ಮ ಪರವಾಗಿ ಧ್ವನಿಯೆತ್ತಲಿಲ್ಲ ಎಂದು ಸಿದ್ದರಾಮಯ್ಯ ನೋವು ತೋಡಿಕೊಂಡರು.

ಅರಮನೆ ಮೈದಾನದಲ್ಲಿ ಭಾನುವಾರ ಕರ್ನಾಟಕ ಪ್ರದೇಶ ಕುರುಬರ ಸಂಘ ಹಮ್ಮಿಕೊಂಡಿದ್ದ “ಪ್ರತಿಭಾ ಪುರಸ್ಕಾರ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ನಾಲ್ಕು ಕೋಟಿ ಜನರಿಗೆ ಅನ್ನಭಾಗ್ಯ, ಲಕ್ಷಾಂತರ ವಿದ್ಯಾರ್ಥಿಗಳಿಗೆ ವಾರದ ಐದು ದಿನಗಳು ಕ್ಷೀರಭಾಗ್ಯ, ಕೃಷಿಭಾಗ್ಯದಡಿ ಕೃಷಿ ಹೊಂಡಗಳ ನಿರ್ಮಾಣ, ಎಲ್ಲ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಸೇರಿದಂತೆ ಅನೇಕ ಯೋಜನೆಗಳನ್ನು ನನ್ನ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ್ದೇನೆ. ಇವೆಲ್ಲವೂ ಎಲ್ಲ ಜಾತಿಗಳಿಗೂ ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ಸಾಮಾಜಿಕನ್ಯಾಯದಡಿ ಇಷ್ಟೆಲ್ಲಾ ಯೋಜನೆಗಳನ್ನು ಘೋಷಿದ್ದರೂ ಆ ಜಾತಿ ವಿರೋಧಿ, ಈ ಜಾತಿ ವಿರೋಧಿಯಾಗಿ ಜಾತಿಗಳನ್ನು ಒಡೆಯುತ್ತೇನೆ ಎಂದು ಅಪಪ್ರಚಾರ ಮಾಡಿ ಸೋಲಿಸಿಬಿಟ್ಟರು. ಸಾಮಾಜಿಕ ನ್ಯಾಯದಿಂದ ಈವರೆಗೆ ವಂಚಿತರಾದವರು ಚುನಾವಣೆಯಲ್ಲಿ ಟೀಕಾಕಾರರಿಗೆ ತಿರುಗೇಟು ನೀಡಬೇಕಾಗಿತ್ತು. ಅವರು ಕೂಡ ಮೌನ ವಹಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.

 

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago