Featured

ನಾನು ಡಿಸಿಎಂ ಆಗಿ ಕ್ಷೇತ್ರಕ್ಕೆ ಬಂದಿಲ್ಲ, ಭಕ್ತನಾಗಿ ಬಂದಿದ್ದೇನೆ : ಕಾಪು ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ – vishwanews24

ನಾನು ಡಿಸಿಎಂ ಆಗಿ ಕ್ಷೇತ್ರಕ್ಕೆ ಬಂದಿಲ್ಲ, ಭಕ್ತನಾಗಿ ಬಂದಿದ್ದೇನೆ : ಕಾಪು ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್..

ರಾಜ್ಯದಲ್ಲೆಲ್ಲೂ ಸರಕಾರದ ಬೆಂಬಲವಿಲ್ಲದೆ ಜನರೇ ದೇಗುಲ ಕಟ್ಟಿದ್ದು ನಾನೆಲ್ಲೂ ನೋಡಿಲ್ಲ…

ಪತ್ನಿ ಹೆಸರಿನಲ್ಲಿ 9,99,999 ರೂ.ಗಳ‌ ಚಿನ್ನದ ಕಲಶ ಸೇವೆ ನೀಡಿದ ಡಿಕೆಶಿ..

ಕಾಪು: ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರವಿವಾರ (ಮಾ.02) ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಅಮ್ಮನವರ ಗದ್ದುಗೆ ಪ್ರತಿಷ್ಠೆ ಕಾರ್ಯದಲ್ಲಿ ಭಾಗಿಯಾದರು.

ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಪತ್ನಿ ಉಷಾ ಹೆಸರಿನಲ್ಲಿ 9,99,999 ರೂ.ಗಳ‌ ಚಿನ್ನದ ಕಲಶ ಸೇವೆ ನೀಡಿದರು. ಕಾಪು ಕ್ಷೇತ್ರದ ವತಿಯಿಂದ ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸನ್ಮಾನ ಮಾಡಿದರು. ಮಾರಿಯಮ್ಮನ ಪ್ರಥಮ ಪ್ರಸಾದ ಡಿಕೆ ಶಿವಕುಮಾರ್‌ ಅವರಿಗೆ ನೀಡಲಾಯಿತು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್‌ ಅವರು, ಭಕ್ತನ ಭಗವಂತನ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ. ಧರ್ಮ ಯಾವುದಾದರೂ ತತ್ವವೊಂದೇ. ನಾಡ ದೇವತೆ ಚಾಮುಂಡೇಶ್ವರಿಗೂ ಈ ಕ್ಷೇತ್ರಕ್ಕೂ ಇತಿಹಾಸವಿದೆ. ಕಾಪು ಎಂದರೆ ರಕ್ಷಣಾ ಸ್ಥಳವೆಂದು ಕೇಳಿಬಲ್ಲೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ ಎಂಬಂತೆ ಮಾರಿಯಮ್ಮನ ಮೊದಲ ಪ್ರಸಾದ ಸಿಕ್ಕಿದ್ದು ನಮ್ಮ ಭಾಗ್ಯ ಎಂದರು.

ನಾನು ಡಿಸಿಎಂ ಆಗಿ ಕ್ಷೇತ್ರಕ್ಕೆ ಬಂದಿಲ್ಲ, ನಾನು ಭಕ್ತನಾಗಿ ಬಂದಿದ್ದೇನೆ. ರಾಜ್ಯದಲ್ಲೆಲ್ಲೂ ಸರಕಾರದ ಬೆಂಬಲವಿಲ್ಲದೆ ಜನರೇ ದೇಗುಲ ಕಟ್ಟಿದ್ದು ನಾನೆಲ್ಲೂ ನೋಡಿಲ್ಲ. ನಾನು ಪ್ರಸನ್ನನಾಗಿದ್ದೇನೆ. ಮುಂದೆ ಪತ್ನಿ ಮತ್ತು ಕುಟುಂಬವನ್ನು ಇಲ್ಲಿಗೆ ಕಳುಹಿಸುತ್ತೇನೆ. ಎಲ್ಲಾ ಕಾರ್ಯಕ್ರಮ ಮುಗಿದ ಮೇಲೆ ಮತ್ತೆ ಕ್ಷೇತ್ರಕ್ಕೆ ಬರುತ್ತೇನೆ ಎಂದರು.

ದೇವರು ವರ -ಶಾಪ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಮಾತೃಭೂಮಿ, ಭೂತಾಯಿ, ದೇವಿ ದರ್ಶನ ಮಾಡುವ ಅವಕಾಶ ಸಿಕ್ಕಿದೆ. ಧರ್ಮ ಉಳಿಸಬೇಕು ನಾವು ನಮ್ಮ ಧರ್ಮ ಕಾಪಾಡಬೇಕು. ಯಾರಿಗಾದರು ತೊಂದರೆ ಕೊಡಬೇಕೆಂದು ಯಾವ ಧರ್ಮದಲ್ಲೂ ಇಲ್ಲ. ದೇಗುಲಕ್ಕೆ ಸೇವೆ ಮಾಡಿದವರಿಗೆ ದೇವರ ಆಶೀರ್ವಾದ ಇರುತ್ತದೆ. ಭಕ್ತಿ ಇಲ್ಲದೆ ಯಾವ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಡಿಕೆ ಶಿವಕುಮಾರ್‌ ಹೇಳಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

5 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

8 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

12 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

12 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

12 hours ago