ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕ್ಷಮೆ ಕೋರಲು ಗಡುವು ನೀಡಿದ್ದ ಕರ್ನಾಟಕಕ್ಕೆ ಕ್ಷಮೆ ಕೇಳಲ್ಲ, ನಾನು ತಪ್ಪು ಮಾಡಿಲ್ಲ ಎಂದು ಕಮಲ್ ಹಾಸನ್ ಮತ್ತೆ ಉದ್ಧಟತನ ತೋರಿದ್ದಾರೆ.
ಇಂದು (ಮೇ 30) ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಸುದ್ದಿಗೋಷ್ಠಿಯಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.
ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…