ಬೆಂಗಳೂರು: ಇಡಿ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ , ನಿಮ್ಮೆಲ್ಲರಿಗೂ ಅಭಿನಂದನೆಗಳು. ಆಗಸ್ಟ್ 2 2017ರಿಂದ ನನ್ನ ಬಗ್ಗೆ ವಿವಿಧ ರೀತಿಯಲ್ಲಿ ನೀವೆಲ್ಲಾ ವ್ಯಾಖ್ಯಾನ ಮಾಡಿದ್ದೀರಿ. ಪ್ರ, ಕೆಲವರು ಇರೋ ವಿಚಾರವನ್ನ ತಿರುಚಿ ತಮ್ಮದೆಯಾದ ರೀತಿಯಲ್ಲಿ ಕಲ್ಪನೆ ಮಾಡಿಕೊಂಡಿದ್ದೀರಿ. ನಿಮ್ಮ ಅನುಕೂಲಕ್ಕೆ ಯಾವ ರೀತಿ ಬಿಂಬಿಸಬೇಕೋ ಹಾಗೆ ಬಿಂಬಿಸಿದ್ದೀರಿ ಎಂದರು.
ಪಕ್ಷದ ನಿಷ್ಠಾವಂತ ಸೈನಿಕನ ರೀತಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗುಜರಾತ್, ಮಹಾರಾಷ್ಟ್ರ ಹಾಗೂ ನಮ್ಮ ಶಾಸಕರನ್ನು ಕಾಪಾಡುವ ಜವಾಬ್ದಾರಿ ನಿಭಾಯಿಸಿಕೊಂಡು ಬಂದಿದ್ದೇನೆ. ಕಳೆದ 40 ವರ್ಷದಿಂದ ನನ್ನದೆ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕೆಲವೊಮ್ಮೆ ಟೀಕೆ ಮಾಡಿರಬಹುದು, ಕೆಲವೊಮ್ಮೆ ಸಹಾಯ ಮಾಡಿರಬಹುದು. ನನ್ನ ಹೋರಾಟದಲ್ಲಿ ಕೆಲವರು ಸಂತೋಷ ಪಟ್ಟಿರಬಹುದು, ಕೆಲವರು ದು:ಖ ಪಟ್ಟಿರಬಹುದು. ಪಕ್ಷಕ್ಕಾಗಿ ನಿರಂತರವಾಗಿ ಪ್ರಾಮಾಣಿಕೆಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದರೆ ಈಗ ನನ್ನ ಮೇಲೆ, ನನ್ನ ಕುಟುಂಬ ಹಾಗೂ ಸ್ನೇಹಿತರ ಮೇಲೆ ಇಡಿ ದಾಳಿ ನಡೆಸಿದೆ. ಈ ಬಗ್ಗೆ ನಾನು ನಮ್ಮ ಶಾಸಕರ ಜೊತೆ ರೆಸಾರ್ಟಿನಲ್ಲಿದ್ದಾಗ ನೀವು ತೋರಿಸಿದ್ದೀರಿ ಎಂದು ತಿಳಿಸಿದರು.
ಇದನ್ನು ಕಾನೂನು ಚೌಕಟ್ಟಿನಲ್ಲೂ ಎದುರಿಸಬೇಕಾಗುತ್ತೆದೆ, ರಾಜಕೀಯವಾಗಿಯೂ ಎದುರಿಸ ಬೇಕಾಗುತ್ತದೆ. ನಾನು ತಪ್ಪು ಮಾಡಿಲ್ಲ, ಕೊಲೆ ಮಾಡಿಲ್ಲ, ಮೋಸ ಮಾಡಿಲ್ಲ. ನ್ಯಾಯಯುತವಾಗಿ ದುಡಿದಿದ್ದೇನೆ, ಬದುಕಿದ್ದೇನೆ. ಷಡ್ಯಂತ್ರಗಳನ್ನು ಮಾಡಿ ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನ್ಯಾಯಯುತವಾಗಿ ಹೋರಾಡುತ್ತೇನೆ ಎಂದು ಹೇಳಿದರು.
ನಾನು ಹೆದರಿಕೊಂಡು ಹೋಗುವ ಕೆಂಪೇಗೌಡನ ಮಗನಲ್ಲ. ನಾನು ಕಾನೂನಾಗಿ, ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಎದುರಿಸುತ್ತೇನೆ. ನಮ್ಮ ಮನೆಗಳಲ್ಲಿ ಸಿಕ್ಕ ಹಣದ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ಬಿಜೆಪಿ ಆಪರೇಷನ್ ಮಾಡಿದಾಗ ಕೋಟಿಗಟ್ಟಲೆ ಹಣದ ವ್ಯವಹಾರ ಮಾಡಿರುವ ಬಗ್ಗೆ ಯಾಕೆ ಯಾರು ಪ್ರಶ್ನಿಸಿಲ್ಲ. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ. ಸದನದಲ್ಲಿ ಬಹಿರಂಗವಾಗಿಯೇ ಬಿಜೆಪಿ ಕೋಟಿಗಟ್ಟಲೇ ಹಣದ ಆಮಿಷ ಒಡ್ಡಿರುವ ಬಗ್ಗೆ ನಮ್ಮ ನಾಯಕರು ಹೇಳಿದ್ದಾರೆ. ಆದರೂ ಬಿಜೆಪಿ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಒಂದು ನ್ಯಾಯ ಅಂದರೆ ಹೇಗೆ? ನಾನು ಯಾವುದಕ್ಕೂ ಹೆದರಲ್ಲ. ನಾನು ತಪ್ಪು ಮಾಡಿಲ್ಲ. ಇಡಿ ನೊಟಿಸ್‍ಗೆ ಗೌರವಿಸುತ್ತೇನೆ, ಅದಕ್ಕೆ ಉತ್ತರ ಕೂಡ ನೀಡುತ್ತೇನೆ ಎಂದು ಕಿಡಿಕಾರಿದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…