Featured

ನಾನು ದುರಂತ ನಾಯಕನೋ? ದೃಢನಾಯಕನೋ ಸದ್ಯದಲ್ಲೇ ಗೊತ್ತಾಗಲಿದೆ ; ದೇವರು ಕೊಟ್ಟ ಅಧಿಕಾರ ಎಲ್ಲಿಯವರೆಗೂ ಬೆಂಬಲ ಸಿಗುತ್ತದೆಯೋ ಅಲ್ಲಿಯವರೆಗೂ ಯಶಸ್ವಿಯಾಗಿ ನಡೆಸುತ್ತೇನೆ : ಎಚ್ ಡಿಕೆ

ರಾಮನಗರ : ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ನವರು ನೋವು ಕೊಡುತ್ತಿದ್ದಾರೆಂದು ನಾನು ಕಣ್ಣೀರಿಟ್ಟಿಲ್ಲ. ಸಾರ್ವಜನಿಕ ವಲಯದಿಂದ ಬೆಂಬಲ ಸಿಗುತ್ತಿಲ್ಲವೆಂಬ ನೋವಿಗೆ ಕಣ್ಣೀರಿಟ್ಟಿದ್ದೇನೆ. ಅದನ್ನು ಮಾಧ್ಯಮದವರು ತಿರುಚಿ ತಪ್ಪು ಸಂದೇಶ ನೀಡಿರುವುದು ಸರಿಯಲ್ಲ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಒಡಕು ಉಂಟಾಗಿದೆ ಎಂದು ತಪ್ಪಾಗಿ ಬಿಂಬಿಸಲಾಗಿದೆ. ಕಾಂಗ್ರೆಸ್ ನಾಯಕರು ತಮಗೆ ಮುಕ್ತ ಸಹಕಾರ ನೀಡುತ್ತಿದ್ದಾರೆ. ನನ್ನ ಕಾರ್ಯಕ್ರಮಗಳನ್ನು ನೋಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದವರು ನನಗೆ ಯಾವುದೇ ರೀತಿ ತೊಂದರೆ ಕೊಡುತ್ತಿಲ್ಲ. ಒಳ್ಳೆಯ ಕೆಲಸ ಮಾಡುವಾಗ ಜನರಿಂದ ಉತ್ತಮ ಬೆಂಬಲ ಸಿಗುತ್ತಿಲ್ಲ ಎಂಬ ಭಾವನೆ ನನ್ನ ಮನಸ್ಸಿಗೆ ಘಾಸಿ ಉಂಟು ಮಾಡಿದೆ. ಹೀಗಾಗಿ, ಕಣ್ಣೀರು ಹಾಕಿದ್ದೇನೆಂದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯಾವ ನಾಯಕ ಎಂದು ಗೊತ್ತಾಗಲಿದೆ?

ಕುರ್ಚಿ ಉಳಿಸಿಕೊಳ್ಳಲು ರೈತರ ಸಾಲಮನ್ನಾ ಮಾಡಿಲ್ಲ. ರೈತರ ಹಿತದೃಷ್ಟಿಯಿಂದ ಮತ್ತು ನನ್ನ ಬದ್ಧತೆಯಿಂದ ಸಾಲ ಮನ್ನಾ ಮಾಡಿದ್ದೇನೆ. ಆದರೆ, ಬಿಜೆಪಿ ನಾಯಕರು ನನ್ನ ಬಗ್ಗೆ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ. ನಾನು ದುರಂತ ನಾಯಕನೋ? ದೃಢನಾಯಕನೋ ಎಂಬುದು ಮುಂದಿನ ದಿನಗಳಲ್ಲಿ ಅವರಿಗೆ ಗೊತ್ತಾಗಲಿದೆ ಎಂದು ತೀಕ್ಷ್ಣವಾಗಿ ಉತ್ತರಿಸಿದರು. ದುರಂತ ನಾಯಕನಾಗಿ ಇದೀಗ 44 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಅದರೆ ದೃಢ ನಾಯಕರು ಎನಿಸಿಕೊಂಡಿರುವವರಿಂದ ಸಾಲ ಮನ್ನಾ ಏಕೆ ಆಗಲಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಹಿಂದೆ ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಬೆಂಬಲ ನೀಡಿ, ನಂತರ ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಲ್ಲಿ ೧೫೦ ಕೋಟಿ ರು. ಹಗರಣ ಮಾಡಿದ್ದೇನೆಂದು ಸುಳ್ಳು ಆಪಾದನೆ ಹೊರಿಸಿ ಜನರ ಮುಂದೆ ನನ್ನ ಹೆಸರು ಕೆಡಿಸಲು ಹೋದ ಬಿಜೆಪಿ ನಾಯಕರ ಟೀಕೆಗೆ ಉತ್ತರ ಕೋಡಬೇಕಾಗಿಲ್ಲ. ದೇವರು ಕೊಟ್ಟ ಅಧಿಕಾರ ಎಲ್ಲಿಯವರೆಗೂ ಬೆಂಬಲ ಸಿಗುತ್ತದೆಯೋ ಅಲ್ಲಿಯವರೆಗೂ ಯಶಸ್ವಿಯಾಗಿ ನಡೆಸುತ್ತೇನೆ ಎಂದರು.

ಸಮ್ಮಿಶ್ರ ಸರ್ಕಾರ ಅಭಿವೃದ್ಧಿ ಜೊತೆಗೆ ರೈತ ಪರವಾದ ಚಿಂತನೆ ನಡೆಸುತ್ತಿದೆ. ಇದಕ್ಕೆ ಕಾಂಗ್ರೆಸ್ ಮುಕ್ತ ಸಹಕಾರವಿದ್ದು, ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರಿಗೆ ಕೃತಜ್ಞನಾಗಿದ್ದೇನೆ. ಎಂತಹ ಕಠಿಣ ಪರಿಸ್ಥಿತಿಯಲ್ಲೂ ದಿಟ್ಟ ಕ್ರಮ ಕೈಗೊಂಡಾಗ ಸಾರ್ವಜನಿಕವಾಗಿ ಬೆಂಬಲ ದೊರಕಬೇಕು. ಅದು ಸಾಧ್ಯವಾಗದೆ ಇದ್ದಾಗ ನನಗೆ ನೋವಾಗುವುದು ಸಹಜ ಎಂದು ಹೇಳಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago