ಬೆಂಗಳೂರು : ಮಂಗಳೂರು ಬಾಂಬ್ ಪತ್ತೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೆ, ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ನನಗೂ ಉಗ್ರರಿಗೂ ಯಾವುದೆ ಸಂಬಂಧವಿಲ್ಲ ಎಂದು ಬಂಧಿತ ಆರೋಪಿ ಆದಿತ್ಯ ರಾವ್ ವಿಚಾರಣೆ ವೇಳೆ ಸ್ಪಷ್ಟನೆ ನೀಡಿದ್ದಾನೆ.
ಸೋಮವಾರ ಮಂಗಳೂರು ಏರ್ಪೋರ್ಟ್ನಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಮುಂಜಾನೆ ವಿಮಾನ ನಿಲ್ದಾಣಕ್ಕೆ ಆಟೋ ಮೂಲಕ ವ್ಯಕ್ತಿಯೋರ್ವ ಬಂದಿದ್ದ . ಈ ವೇಳೆ ಬಾಂಬ್ ಇದ್ದ ಲ್ಯಾಪ್ಟಾಪ್ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ. ಈ ಬ್ಯಾಗ್ನಲ್ಲಿ ಸಜೀವ ಬಾಂಬ್ ಇರುವುದು ನಂತರ ಪತ್ತೆಯಾಗಿತ್ತು. ಇದರ ಹಿಂದೆ ಉಗ್ರರ ಕೈವಾಡವಿದೆ ಎನ್ನುವ ವಿಚಾರ ಚರ್ಚೆಯಲ್ಲಿರುವಾಗಲೇ ಪ್ರಕರಣದ ಆರೋಪಿ ಪೊಲೀಸರಿಗೆ ಶರಣಾಗಿದ್ದ.
ಪೊಲೀಸರು ಆದಿತ್ಯನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾನೆ. “ಬಾಂಬ್ ಇಟ್ಟ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದವು. ಸಿಕ್ಕಿ ಬೀಳುವ ಭಯ ಶುರುವಾಗಿತ್ತು. ಘಟನೆ ಬಳಿಕ ತಪ್ಪಿನ ಅರಿವಾಗಿತ್ತು. ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ,” ಎಂದಿದ್ದಾನೆ ಆದಿತ್ಯ.
ಪೊಲೀಸರು ಗುಂಡು ಹಾರಿಸಿದರೆ ಎನ್ನುವ ಭಯದಿಂದ ಆದಿತ್ಯ ಪೊಲೀಸರಿಗೆ ಶರಣಾಗಿದ್ದಾನಂತೆ. “ಇತ್ತೀಚೆಗೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸುವ ಪ್ರಕರಣಗಳು ಹೆಚ್ಚಾಗಿವೆ. ನನಗೂ ಗುಂಡು ಹೊಡೆಯಬಹುದು ಎಂಬ ಭಯವಿತ್ತು. ಹೀಗಾಗಿ ಡಿಜಿಪಿ ಕಚೇರಿಗೆ ಬಂದು ಶರಣಾಗಲು ನಿರ್ಧರಿಸಿದೆ,” ಎಂದು ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.
ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…