ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ , ನನಗೂ ಉಗ್ರರಿಗೂ ಯಾವುದೆ ಸಂಬಂಧವಿಲ್ಲ , ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ : ಆದಿತ್ಯ ರಾವ್ -Vishwanews24

ಬೆಂಗಳೂರು : ಮಂಗಳೂರು ಬಾಂಬ್​ ಪತ್ತೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೆ, ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ನನಗೂ ಉಗ್ರರಿಗೂ ಯಾವುದೆ ಸಂಬಂಧವಿಲ್ಲ ಎಂದು ಬಂಧಿತ ಆರೋಪಿ ಆದಿತ್ಯ ರಾವ್ ವಿಚಾರಣೆ ವೇಳೆ ಸ್ಪಷ್ಟನೆ ನೀಡಿದ್ದಾನೆ.

ಸೋಮವಾರ ಮಂಗಳೂರು ಏರ್​ಪೋರ್ಟ್​ನಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಮುಂಜಾನೆ ವಿಮಾನ ನಿಲ್ದಾಣಕ್ಕೆ ಆಟೋ ಮೂಲಕ ವ್ಯಕ್ತಿಯೋರ್ವ ಬಂದಿದ್ದ . ಈ ವೇಳೆ ಬಾಂಬ್ ಇದ್ದ ಲ್ಯಾಪ್​ಟಾಪ್​ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ. ಈ ಬ್ಯಾಗ್​ನಲ್ಲಿ ಸಜೀವ ಬಾಂಬ್ ಇರುವುದು ನಂತರ ಪತ್ತೆಯಾಗಿತ್ತು. ಇದರ ಹಿಂದೆ ಉಗ್ರರ ಕೈವಾಡವಿದೆ ಎನ್ನುವ ವಿಚಾರ ಚರ್ಚೆಯಲ್ಲಿರುವಾಗಲೇ ಪ್ರಕರಣದ ಆರೋಪಿ ಪೊಲೀಸರಿಗೆ ಶರಣಾಗಿದ್ದ.

 

ಪೊಲೀಸರು ಆದಿತ್ಯನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾನೆ. “ಬಾಂಬ್ ಇಟ್ಟ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದವು. ಸಿಕ್ಕಿ ಬೀಳುವ ಭಯ ಶುರುವಾಗಿತ್ತು. ಘಟನೆ ಬಳಿಕ ತಪ್ಪಿನ  ಅರಿವಾಗಿತ್ತು. ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ,” ಎಂದಿದ್ದಾನೆ ಆದಿತ್ಯ.

ಪೊಲೀಸರು ಗುಂಡು ಹಾರಿಸಿದರೆ ಎನ್ನುವ ಭಯದಿಂದ ಆದಿತ್ಯ ಪೊಲೀಸರಿಗೆ ಶರಣಾಗಿದ್ದಾನಂತೆ. “ಇತ್ತೀಚೆಗೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸುವ ಪ್ರಕರಣಗಳು ಹೆಚ್ಚಾಗಿವೆ. ನನಗೂ ಗುಂಡು ಹೊಡೆಯಬಹುದು ಎಂಬ ಭಯವಿತ್ತು. ಹೀಗಾಗಿ ಡಿಜಿಪಿ ಕಚೇರಿಗೆ ಬಂದು ಶರಣಾಗಲು ನಿರ್ಧರಿಸಿದೆ,” ಎಂದು ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.

ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago