ನವ ದೆಹಲಿ ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಹುದ್ದೆಯಿಂದ ನಿರ್ಗಮಿಸುತ್ತಿರುವ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರು ಬುಧವಾರ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.
ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶದಲ್ಲಿ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ಜೀವನದಲ್ಲಿ ಒಂದು ವಿಶಿಷ್ಟ ಅನುಭವವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.
‘ನಾನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಕರ್ತವ್ಯಗಳನ್ನು ನಿರ್ವಹಿಸಿದ್ದೇನೆ. ನನಗೆ ಸಹಕಾರ ನೀಡಿ ಕೆಲಸ ಮಾಡಿದವರಿಗೂ ಈ ಸಂದರ್ಭದಲ್ಲಿ ಧನ್ಯವಾದ ಹೇಳುತ್ತೇನೆ’ ಎಂದು ಬೇಡಿ ತಿಳಿಸಿದ್ದಾರೆ.
/ಟೂಲ್‌ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
ಬೇಡಿ ಅವರು ತಮ್ಮ ಅಧಿಕಾರಾವಧಿಯಲ್ಲಿ ‘ಟೀಮ್ ರಾಜ್ ನಿವಾಸ್‘ ಸಾರ್ವಜನಿಕ ಹಿತಾಸಕ್ತಿಗಾಗಿ ಹೆಚ್ಚಿನ ಶ್ರದ್ಧೆಯಿಂದ ಕೆಲಸ ಮಾಡಿದೆ ಎಂಬ ತೃಪ್ತಿ ಇದೆ ಎಂದು ಹೇಳಿದ್ದಾರೆ.
ಚುನಾಯಿತ ಸರ್ಕಾರ ಹಾಗೂ ವಿಶೇಷವಾಗಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಬೇಡಿ ಅವರು, ‘ನಾನು ನನ್ನ ಕರ್ತವ್ಯಗಳನ್ನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಮಾಡಿದ್ದೇನೆ‘ ಎಂದು ತಿಳಿಸಿದ್ದಾರೆ.
‘ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಉಜ್ವಲ ಭವಿಷ್ಯವಿದೆ‘ ಎಂದಿರುವ ಅವರು, ‘ಇಂಥ ಭವಿಷ್ಯವನ್ನು ರೂಪಿಸುವುದು ಜನರ ಕೈಯಲ್ಲಿದೆ‘ ಎಂದಿದ್ದಾರೆ. ಜತೆಗೆ ‘ಪುದುಚೇರಿ ಸಮೃದ್ಧವಾಗಿ ಬೆಳೆಯಲಿ‘ ಎಂದು ಹಾರೈಸಿದ್ದಾರೆ.
ಮಂಗಳವಾರ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಹುದ್ದೆಯಿಂದ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಯಿತು. ರಾಷ್ಟ್ರಪತಿ ಭವನದಿಂದಲೇ ಈ ಅಧಿಕೃತ ಅದೇಶ ಪ್ರಕಟಗೊಂಡಿತು. ಈ ಘಟನೆ ನಡೆಯುವ ವಾರದ ಹಿಂದೆ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಅವರು ಕಿರಣ್ ಬೇಡಿ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಒತ್ತಾಯಿಸಿದ್ದರು.
ಇಂಧನದ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…