ಬೆಂಗಳೂರು: ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅದು ನನ್ನ ಭೇಟಿಯ ಉದ್ದೇಶವಾಗಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದರು.
ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅಲ್ಲಿನ ಸ್ಥಳೀಯರ ಅಪೇಕ್ಷೆ ಮೇರೆಗೆ ಹೋಗಿದ್ದೆ. ಹೀಗಾಗಿ ನಾನು ದೇವಸ್ಥಾನ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ. ಎಲ್ಲವನ್ನೂ ಎದೆ ಬಗೆದು ತೋರಿಸಲು ನಾನು ಹನುಮಂತ ಅಲ್ಲ. ಕಾಂಗ್ರೆಸ್‌ನವರಂತೆ ನಾನು ತಿಂದು ಹೋಗಿದ್ದೆ ಏನ್ ಈಗ ಅಂತ ನಾನು ಹೇಳಲ್ಲ ಎಂದು ಸ್ಪಷ್ಟ ಪಡಿಸಿದರು.
ನಾನು ನಾನ್ ವೆಜ್ ತಿಂದಿದ್ದು ಹೌದು, ಆದರೆ ದೇವಸ್ಥಾನದ ಒಳಗೆ ಹೋಗಲಿಲ್ಲ. ದೇವಸ್ಥಾನದ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದು, ಗರ್ಭಗುಡಿಯ ಹೊರಭಾಗದಲ್ಲಿ ಇದ್ದೆ. ದೇವಸ್ಥಾನದ ಆವರಣದಲ್ಲಿ ಕಟ್ಟಡ ಕಟ್ಟಲು ಮುಸ್ಲಿಮರು ಅವಕಾಶ ಕೊಟ್ಟಿರಲಿಲ್ಲ. ಈ ದೇವಸ್ಥಾನಕ್ಕೆ ಭೇಟಿ ನೀಡಬೇಕೆಂದು ಮೊದಲೇ ನಿರ್ಧಾರ ಮಾಡಿರಲಿಲ್ಲ. ಅಲ್ಲಿನ ಸ್ಥಳೀಯರೇ ಕರೆದುಕೊಂಡು ಹೋಗಿದ್ದರು. ಕೆಲವು ವೆಜ್ ಮತ್ತು ನಾನ್ ವೆಜ್ ದೇವಸ್ಥಾನಗಳಿವೆ, ನಾನ್ ವೆಜ್ ದೇವಸ್ಥಾನಗಳಲ್ಲಿ ಮಾಂಸಹಾರಿ ನೈವೇದ್ಯ ಮಾಡಲಾಗುತ್ತದೆ. ಅಂಥ ದೇವಸ್ಥಾನಗಳಿಗೆ ಹೋಗಬಹುದು ಎಂದು ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…