ನವದೆಹಲಿ: ನಿನ್ನೆ ಪಂಜಾಬ್ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರ0ಜಿತ್ ಸಿಂಗ್ ಚನ್ನಿ ಅವರು ಸ್ಪರ್ಧಿಸಿದ್ದ ಎರಡೂ ಸ್ಥಾನಗಳಾದ ಚಮ್ಕೌರ್ ಸಾಹಿಬ್ ಮತ್ತು ಭದೌರ್ ನಿಂದ ಚುನಾವಣೆಯಲ್ಲಿ ಸೋತಿದ್ದರು.
ಎಎಪಿ ಅಭೂತಪೂರ್ವ ಗೆಲುವನ್ನು ಸಾಧಿಸಿ, ಅಧಿಕಾರದ ಗದ್ದುಗೆ ಹಂತಕ್ಕೆ ತಲುಪಿತ್ತು. ಈ ಹಿನ್ನಲೆಯಲ್ಲಿ, ಇಂದು ರಾಜ್ಯಪಾಲರನ್ನು ಭೇಟಿಯಾದಂತ ಪಂಜಾಬ್ ಸಿಎಂ ಚರನ್ ಜಿತ್ ಸಿಂಗ್ ಚನ್ನಿಯವರು, ಇದೀಗ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ :
ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿಯವರು, ನಿನ್ನ ಘೋಷಣೆಯಾದಂತ ವಿಧಾನಸಭಾ ಚುನಾವಣೆಯಲ್ಲಿ ಭದೌರ್ ನಲ್ಲಿ ಆಮ್ ಆದ್ಮೀ ಪಕ್ಷದ ಲಭ್ ಸಿಂಗ್ ಉಗೋಕೆ ಅವರು 57,000 ಕ್ಕೂ ಹೆಚ್ಚು ಮತಗಳನ್ನು ಪಡೆದರೆ, ಚನ್ನಿ ಅವರು 23,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಇನ್ನೊಂದು ಸ್ಥಾನದಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಪಡೆದರೆ, ಆಮ್ ಆದ್ಮೀ ಪಕ್ಷದ ಅವರ ಹತ್ತಿರದ ಪ್ರತಿಸ್ಪರ್ಧಿ ಚರಂಜಿತ್ ಸಿಂಗ್ ಅವರು 54,000 ಕ್ಕೂ ಹೆಚ್ಚು ಮತಗಳನ್ನು ಪಡೆದರು. ಈ ಮೂಲಕ ಎರಡೂ ಕ್ಷೇತ್ರಗಳಲ್ಲಿ ಚನ್ನಿ ಸೋಲು ಕಂಡಿತ್ತರು.
ಈ ಬಳಿಕ ಟ್ವಿಟ್ ಮಾಡಿದ್ದಂತ ಅವರು, ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ. ಆಮ್ ಆದ್ಮೀ ಪಕ್ಷ ಮತ್ತು ಅವರ ಚುನಾಯಿತ ಮುಖ್ಯಮಂತ್ರಿ ಭಗವಂತ್ ಮನ್ ಜೀ ಅವರನ್ನು ವಿಜಯಕ್ಕಾಗಿ ಅಭಿನಂದಿಸುತ್ತೇನೆ. ಅವರು ಜನರ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದರು. ಇದೀಗ ಅವರು ರಾಜ್ಯಪಾಲರನ್ನು ಭೇಟಿಯಾಗಿ, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಎಎಪಿ ಪಂಜಾಬ್ ನಲ್ಲಿ ಅಧಿಕಾರದ ಗದ್ದುಗೆ ಏರಲು ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…