ಉಡುಪಿ, : ಕೋಟ ಶ್ರೀನಿವಾಸ ಪೂಜಾರಿಗೆ ಉಡುಪಿ ಉಸ್ತುವಾರಿ ನೀಡದ್ದಕ್ಕೆ ಬಿಲ್ಲವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಪಕ್ಷದ ನಿರ್ಧಾರಕ್ಕೆ ಬದ್ದನಾಗಿದ್ದೇನೆ. ಪಕ್ಷ ಕಾಲಕಾಲಕ್ಕೆ ಕೆಲವು ನಿರ್ದೇಶನ ನೀಡುತ್ತದೆ. ಮುಖ್ಯಮಂತ್ರಿಗಳು ನನ್ನನ್ನು ಕರೆದು ಮಂತ್ರಿ ಮಾಡಿ ಖಾತೆ ಹಂಚಿಕೆಯೂ ಮಾಡಿದ್ದಾರೆ. ನನಗೆ ದ.ಕ. ಜಿಲ್ಲೆಯ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ. ಕಾರ್ಯಕರ್ತನಾಗಿ ನಿಷ್ಟೆಯಿಂದ ಸ್ವೀಕಾರ ಮಾಡುತ್ತೇನೆ ಎಂದಿದ್ದಾರೆ.
ಪಾರ್ಟಿಯ ನಿರ್ಧಾರ ಶಿರೋಮಾನ್ಯ. ಪಾರ್ಟಿ ಹಾಗೂ ಮುಖ್ಯಮಂತ್ರಿಗಳ ಆದೇಶ ವಿನಯವಾಗಿ ಸ್ವೀಕರಿಸಿದ್ದೇನೆ. ಯಾವ ನಾಯಕರು ಏನೆಲ್ಲ ಮಾತಾಡಿದ್ದಾರೆ ಏನೆಲ್ಲ ಪ್ರತಿಕ್ರಿಯೆ ನೀಡಿದ್ದಾರೋ ಗೊತ್ತಿಲ್ಲ. ಮುಖ್ಯಮಂತ್ರಿ ಗಳು ಯಾರ್ಯಾರನ್ನ ಉಸ್ತುವಾರಿ ಮಾಡುತ್ತಾರೋ ಅವರನ್ನೆಲ್ಲ ಸ್ವಾಗತಿಸುತ್ತೇನೆ.
ಪೂರ್ಣಪ್ರಮಾಣದ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಕೆಲವರು ರಾಜಿನಾಮೆ ನೀಡಿ ನಮ್ಮ ಪಕ್ಷಕ್ಕೆ ಬರುವವರಿರುತ್ತಾರೆ. ಸೀಮಿತ ಅವಕಾಶ, ಬೇಡಿಕೆ ಹೆಚ್ಚಿದ್ದಾಗ ಜಿಜ್ಞಾಸೆ ಬರುತ್ತವೆ. ಜಿಜ್ಞಾಸೆ ನಿರ್ವಹಿಸಿ ಪಾರ್ಟಿ ಮುನ್ನಡೆಸುವ ಜವಾಬ್ದಾರಿ ಸಿಎಂಗಿದೆ. ಇಂತಹಾ ಸಂದರ್ಭದಲ್ಲಿ ನಾವೆಲ್ಲಾ ಮುಖ್ಯಮಂತ್ರಿಗಳಿಗೆ ಬೆಂಬಲ ನೀಡಬೇಕಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…