ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ; ನಳೀನ್ಕುಮಾರ್ ಕಟೀಲ್ ಸೋಮಾರಿ ಸಂಸದ: ರಮಾನಾಥ್ ರೈ
ಮಂಗಳೂರು: ಸಂಸದ ನಳೀನ್ಕುಮಾರ್ ಒಬ್ಬ ಸೋಮಾರಿ. ಸರ್ಕೀಟ್ ಹೌಸ್ನಲ್ಲಿ ಯಾವಾಗಲೂ ಮಲಗಿಯೇ ಇರುತ್ತಾರೆ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೋ ಮಾಡಿದ ಅಭಿವೃದ್ಧಿ ಕೆಲಸಗಳನ್ನು ತಾವು ಮಾಡಿದ್ದು ಎಂದು ಹೇಳಿಕೊಳ್ಳುತ್ತಾರೆ. ಅವರಿಗೆ ಡಾಲರ್ ಎಂದರೆ ಏನು ಎಂಬುದೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಒಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಮೈತ್ರಿ ಸರ್ಕಾರ ಯಾವುದೇ ಸಮಸ್ಯೆ ಇಲ್ಲದೆ ಚನ್ನಾಗಿ ನಡೆಯುತ್ತದೆ ಎಂದು ಹೇಳಿದರು.
