ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ; ನಳೀನ್​ಕುಮಾರ್​ ಕಟೀಲ್​ ಸೋಮಾರಿ ಸಂಸದ: ರಮಾನಾಥ್​ ರೈ

Featured, ದಕ್ಷಿಣ ಕನ್ನಡ

ಮಂಗಳೂರು: ಸಂಸದ ನಳೀನ್​ಕುಮಾರ್​ ಒಬ್ಬ ಸೋಮಾರಿ.  ಸರ್ಕೀಟ್​ ಹೌಸ್​ನಲ್ಲಿ ಯಾವಾಗಲೂ ಮಲಗಿಯೇ ಇರುತ್ತಾರೆ ಎಂದು ಮಾಜಿ ಸಚಿವ ರಮಾನಾಥ್​ ರೈ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೋ ಮಾಡಿದ ಅಭಿವೃದ್ಧಿ ಕೆಲಸಗಳನ್ನು ತಾವು ಮಾಡಿದ್ದು ಎಂದು ಹೇಳಿಕೊಳ್ಳುತ್ತಾರೆ. ಅವರಿಗೆ ಡಾಲರ್​ ಎಂದರೆ ಏನು ಎಂಬುದೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಒಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಮೈತ್ರಿ ಸರ್ಕಾರ ಯಾವುದೇ ಸಮಸ್ಯೆ ಇಲ್ಲದೆ ಚನ್ನಾಗಿ ನಡೆಯುತ್ತದೆ ಎಂದು ಹೇಳಿದರು.