Featured

ನಾನು ಪಕ್ಷದ ಶಿಸ್ತಿನ ಸಿಪಾಯಿ , ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ : ಡಿಕೆ ಶಿ – vishwanews24

ನಾನು ಪಕ್ಷದ ಶಿಸ್ತಿನ ಸಿಪಾಯಿ, ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ : ಡಿಕೆ ಶಿ

ಬೆಂಗಳೂರು:“ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ದಿಲ್ಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ವದಂತಿಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ” ಎಂದು ತಿಳಿಸಿದರು.

“ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು” ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago