ನವದೆಹಲಿ, :2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಬದಲಾಗಿ ನಿತಿನ್ ಗಡ್ಕರಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಸುದ್ದಿಯ ಬಗ್ಗೆ ಸದ್ಯ ಸ್ವತಃ ಗಡ್ಕರಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಪ್ರಧಾನಿಯಾವುವ ಯಾವುದೇ ಆಸೆ ನನಗೆ ಇಲ್ಲ. ನನ್ನ ಮನಸ್ಸಿನಲ್ಲಿ ಹಾಗೂ ಆರ್ ಎಸ್‍ಎಸ್ ನಲ್ಲೂ ಇಂತಹ ಯಾವುದೇ ಚಿಂತನೆ ಇಲ್ಲ. ನಮಗೆ ರಾಷ್ಟ್ರದ ಅಭಿವೃದ್ಧಿಯೇ ಮೊದಲ ಆಯ್ಕೆ ಆಗಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಬೇಕೆಂಬುದು ದೇಶದ ನಾಗರಿಕರ ಅಪೇಕ್ಷೆಯಾಗಿದೆ. ಅವರೇ ಮುಂದಿನ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಈ ವಿಚಾರದಲ್ಲಿ ತಮ್ಮ ಅಥವಾ ಆರ್‍ಎಸ್‍ಎಸ್ ನಾಯಕರ ಯಾವುದೇ ಆಕ್ಷೇಪವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಮತ್ತು ನನ್ನ ಪಕ್ಷ ಮೋದಿ ಜೀ ಅವರ ಬೆನ್ನಿಗೆ ನಿಂತು ಅವರ ಉತ್ತಮ ಕಾರ್ಯಗಳನ್ನು ಬೆಂಬಲಿಸುತ್ತೇವೆ. ನಾನು ಯಾವುದೇ ಲೆಕ್ಕಾಚಾರಗಳನ್ನು ಮಾಡಿಲ್ಲ. ಅಲ್ಲದೇ ಯಾವುದೇ ಟಾರ್ಗೆಟ್ ಕೂಡ ಇಟ್ಟುಕೊಂಡಿಲ್ಲ. ನಾನು ನಾನು ನಂಬಿದ ದಾರಿ ಎಲ್ಲಿ ಕರೆದ್ಯೊಯುತ್ತದೆ ಅಲ್ಲಿಗೆ ಸಾಗುತ್ತೇನೆ. ನನಗೆ ನೀಡಿದ ಜವಾಬ್ದಾರಿಗಳನ್ನು ಮಾತ್ರ ನಿರ್ವಹಿಸುತ್ತೇನೆ ಎಂದಿದ್ದಾರೆ.
ಈ ಹಿಂದೆ ತಾವು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಹೇಳಿದ್ದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿತಿನ್ ಗಡ್ಕರಿ, ಈ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂಬ ಅರ್ಥದಲ್ಲಿ ನಾನು ಹೇಳಿದ್ದೆ ಹೊರತು ನಾನೇ ಆ ಹುದ್ದೆಗೆ ಪ್ರಬಲ ಪ್ರತಿಸ್ಪರ್ಧಿ ಎಂಬ ರೀತಿ ಹೇಳಿಲ್ಲ ಎಂದು ಸಮಜಾಯಿಷಿ ನೀಡಿದರು.
ಈ ಹಿಂದೆ ಗಡ್ಕರಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಮೆಚ್ಚುಗೆ ಸೂಚಿಸಿ ಬಿಜೆಪಿಯಲ್ಲಿರುವ ಎದೆಗಾರಿಕೆಯ ನಾಯಕ ಎಂದರೆ ಅದು ಗಡ್ಕರಿ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…