ಬೆಂಗಳೂರು: ನಟ ಪ್ರಕಾಶ್ ರಾಜ್ ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇಂದು ತಮ್ಮ ಮತ ಚಲಾಯಿಸಿದ್ದಾರೆ.
ನಂತರ ಎಕ್ಸ್‌ನಲ್ಲಿ ಅವರು ವೀಡಿಯೋ ಸಂದೇಶವನ್ನು ಪೋಸ್ಟ್ ಮಾಡಿ ತಮ್ಮ ಅಬಿಮಾನಿಗಳು ಮತ್ತು ಫಾಲೋವರ್ಸ್‌ಗೆ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ನಾನು ಬದಲಾವಣೆಗೆ ಮತ ನೀಡಿದ್ದೇನೆ. ನಾನು ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ ಮತ್ತು ಬದಲಾವಣೆ ತನ್ನಿ. ಎಲ್ಲರನ್ನೂ ಪ್ರೀತಿಸುತ್ತೇನೆ,” ಎಂದು ಅವರು ತಮ್ಮ ವೀಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ವೀಡಿಯೋಗೆ ನೀಡಿದ ಶೀರ್ಷಿಕೆಯಲ್ಲಿ ಅವರು “ನಾನು ಮತದಾನ ಮಾಡಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ #ಜಸ್ಟ್‌ಆಸ್ಕಿಂಗ್#ಸೇವ್‌ಡೆಮಾಕ್ರೆಸಿಸೇವ್‌ಇಂಡಿಯಾ” ಎಂದು ಬರೆದಿದ್ದಾರೆ.
ಮತ ಚಲಾಯಿಸಿದ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ ಪ್ರಕಾಶ್ ರಾಜ್ “ನನ್ನ ಮತ ನನ್ನ ಹಕ್ಕಿಗೆ ಸಂಬಂಧಿಸಿದೆ, ಯಾರು ನನ್ನನ್ನು ಪ್ರತಿನಿಧಿಸಬೇಕೆಂದು, ಯಾರು ಸಂಸತ್ತಿನಲ್ಲಿ ನನ್ನ ದನಿಯಾಗಬೇಕೆಂದು ಆರಿಸುವ ನನ್ನ ಅಧಿಕಾರವಿದು. ಕಳೆದೊಂದು ದಶಕದಲ್ಲಿ ನಾವು ನೋಡಿರುವ ದ್ವೇಷ ಮತ್ತು ವಿಭಜನಾತ್ಮಕ ರಾಜಕಾರಣದಿಂದಾಗಿ ನೀವು ನಂಬಿಕೆಯಿರಿಸಿರುವ ಅಭ್ಯರ್ಥಿಗೆ ಮತ ನೀಡುವುದು ಅಗತ್ಯ. ನಾನು ನಂಬಿಕೆ ಇರಿಸಿದ ಅಭ್ಯರ್ಥಿಗೆ ಹಾಗು ಅವರು ತಂದ ಪ್ರಣಾಳಿಕೆಗೆ ಮತ್ತು ಬದಲಾವಣೆಗೆ ಮತ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…