ಹುಬ್ಬಳ್ಳಿ: ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡುವುದಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ಏಕೀಕರಣ ಆದ ಮೇಲೆ ಯಾವುದೇ ಮುಖ್ಯಮಂತ್ರಿ ರಾಜ್ಯವನ್ನ ಒಡೆದು ಆಳುವ ನೀತಿ ಅನುಸರಿಸಿರಲಿಲ್ಲ. ಅದರೆ, ಕುಮಾರಸ್ವಾಮಿ ಆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿಎಂ ಕೆಲಸವನ್ನು ನಾನು ಮಾಡುತ್ತಿದ್ದೇನೆ:
ಬೆಳಗಾವಿಯಲ್ಲಿ ನೂರಾರು ಜನ ಸ್ವಾಮೀಜಿಗಳು ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಸಿಎಂ ಪ್ರತಿಭಟನಾ ಸ್ಥಳಕ್ಕೆ ಬಂದು ಮನವೊಲಿಸುವ ಪ್ರಯತ್ನ ಮಾಡಬೇಕಿತ್ತು. ಆದರೆ, ಆ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಪ್ರತಿಭಟನಾ ಸ್ಥಳಕ್ಕೆ ತೆರಳಿ, ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು.
ರಾಜ್ಯಕ್ಕೆ ಅನ್ನ ಕೊಡುತ್ತಿರುವುದು ಉತ್ತರ ಕರ್ನಾಟಕ :
ಇಡೀ ರಾಜ್ಯಕ್ಕೆ ಅನ್ನ ಕೊಡುತ್ತಿರುವುದು ಉತ್ತರ ಕರ್ನಾಟಕ. ಬೆಳಕು ನೀಡುವುದು ಕಾರವಾರ. ಬಜೆಟ್ನಲ್ಲಿ ಆಲಮಟ್ಟಿ ನೀರಾವರಿ ಯೋಜನೆಗೆ ನೈಯಾ ಪೈಸೆ ತೆಗೆದಿಟ್ಟಿಲ್ಲ. ಈ ಹಿಂದೆ ನೀರಾವರಿ ಯೋಜನೆಗೆ ಸಿದ್ದರಾಮಯ್ಯ ಕೂಡ ಅನ್ಯಾಯ ಮಾಡಿದ್ದಾರೆ. ಹೈದರಾಬಾದ್ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆ ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಮನಸ್ಸು ಮಾಡಿಲ್ಲ. ಆಲಮಟ್ಟಿ ಉದ್ಯಾನವನವನ್ನ ಅಭಿವೃದ್ಧಿ ಮಾಡಿಲ್ಲ. ಆದರೆ, ಕೆಆರ್‌ಎಸ್ ಅಭಿವೃದ್ಧಿ ಮಾಡಿದ್ದಾರೆ ಎಂದು ಟೀಕಿಸಿದರು.
ಬೆಂಕಿ ಹಚ್ಚುವ ಕೆಲಸ
ಪ್ರತ್ಯೇಕ ರಾಜ್ಯದ ಹಿಂದೆ ಬಿಜೆಪಿ ಕುಮ್ಮಕ್ಕು ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಕೆಂಡಾಮಂಡಲರಾದ ಬಿಎಸ್ವೈ, ಯಾರೋ ತೆಲೆ ತಿರುಕ ಹೇಳಿದ್ದಾನೆ ಎಂದು ಟಾಂಗ್ ನೀಡಿದರು. ಶ್ರೀರಾಮುಲು, ಉಮೇಶ್ ಕತ್ತಿ ಪ್ರತ್ಯೇಕ ರಾಜ್ಯ ಬೇಡಿಕೆ ಇಟ್ಟಿಲ್ಲ. ಬದಲಾಗಿ ಈ ಭಾಗದ ಜನರ ಭಾವನೆಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಒಡೆದು ಆಳುವುದೇ ಜೆಡಿಎಸ್ನ ಮುಖ್ಯ ಉದ್ದೇಶವಾಗಿದ್ದು, ಬೆಂಕಿ ಹಚ್ಚುವ ಕೆಲಸವನ್ನು ಅಪ್ಪ ಮಕ್ಕಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…