Featured

ನಾನು ಬಿಜೆಪಿಗೆ ಸೇರಿ ಪಕ್ಷ ಸಂಘಟನೆ ಮಾಡಬೇಕು : ಬಳ್ಳಾರಿ ಕಾಂಗ್ರೆಸ್ ನಾಯಕ ಅನಿಲ್ ಲಾಡ್ -Vishwanews24

ಬಳ್ಳಾರಿ: .ನಾನು ಬಿಜೆಪಿಗೆ ಸೇರಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಆದರೆ ಯಾರಿಗೂ ಹೇಳದೆ, ಬೆನ್ನಿಗೆ ಚೂರಿ ಹಾಕಿ ಹೋಗುವುದಿಲ್ಲ. ಕಾರ್ಯಕರ್ತರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಅನಿಲ್ ಲಾಡ್ ಹೇಳಿದ್ದಾರೆ.

ನಾನು ಬಿಜೆಪಿಗೆ ಸೇರುತ್ತಿರುವುದಾಗಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿಳಿಸಿದ್ದೇನೆ. ರಾಹುಲ್​ ಗಾಂಧಿ, ಸೋನಿಯಾ ಗಾಂಧಿಯವರನ್ನೂ ಭೇಟಿ ಮಾಡಿ ವಿಷಯ ತಿಳಿಸುತ್ತೇನೆ. ನನಗೇನೂ ಪಕ್ಷದ ಬಗ್ಗೆ ಅಸಮಾಧಾನ ಇಲ್ಲ. ಹಾಗಂತ ಇಲ್ಲಿರಲು ಆಗುತ್ತಿಲ್ಲ. ಬೇಷರತ್ತಾಗಿ ಬಿಜೆಪಿ ಸೇರುತ್ತಿದ್ದೇನೆ. ಹಣಕ್ಕಾಗಿಯೂ ಪಕ್ಷ ಬದಲಿಸುತ್ತಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಕಾಂಗ್ರೆಸ್​ನವರು ಯಾರೂ ಮನವೊಲಿಸಲು ಬರುವುದಿಲ್ಲ. ಅಧಿಕಾರ ಬಿಟ್ಟುಕೊಡುವುದಿಲ್ಲ. ಹಾಗಂತ ನಾನು ಬಿಜೆಪಿಗೆ ಸೇರಿದ ತಕ್ಷಣ ನನಗೇನೂ ಸ್ಥಾನಮಾನ ಸಿಗುವುದಿಲ್ಲ. ಆದರೆ ಇನ್ನು ಅಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಶ್ರೀರಾಮುಲು ಹಾಗೂ ಆನಂದ್​ ಸಿಂಗ್​ ಜತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಮೊಳಕಾಲ್ಮೂರು ಸಂಸದ ಮತ್ತು ಸಚಿವ ಬಿ. ಶ್ರೀರಾಮುಲು ಜೊತೆ ಈ ಕುರಿತು ಅನಿಲ್ ಲಾಡ್ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಲು ಅನಿಲ್ ಲಾಡ್ ಪ್ರಯತ್ನ ನಡೆಸುತ್ತಿದ್ದಾರೆ. ಯಡಿಯೂರಪ್ಪ ಒಪ್ಪಿಗೆ ಪಡೆದ ಬಳಿಕ ಬಿಜೆಪಿ ಸೇರುವ ಕುರಿತು ಅವರು ಅಧಿಕೃತ ಘೋಷಣೆ ಮಾಡುವ ನಿರೀಕ್ಷೆ ಇದೆ.

ಅನಿಲ್​ ಲಾಡ್​ ಕಾಂಗ್ರೆಸ್​ನಿಂದ ಎರಡುಬಾರಿ ಶಾಸಕರಾಗಿದ್ದವರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

13 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

17 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

17 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

18 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago