ಬಳ್ಳಾರಿ: .ನಾನು ಬಿಜೆಪಿಗೆ ಸೇರಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಆದರೆ ಯಾರಿಗೂ ಹೇಳದೆ, ಬೆನ್ನಿಗೆ ಚೂರಿ ಹಾಕಿ ಹೋಗುವುದಿಲ್ಲ. ಕಾರ್ಯಕರ್ತರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಅನಿಲ್ ಲಾಡ್ ಹೇಳಿದ್ದಾರೆ.
ನಾನು ಬಿಜೆಪಿಗೆ ಸೇರುತ್ತಿರುವುದಾಗಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿಳಿಸಿದ್ದೇನೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನೂ ಭೇಟಿ ಮಾಡಿ ವಿಷಯ ತಿಳಿಸುತ್ತೇನೆ. ನನಗೇನೂ ಪಕ್ಷದ ಬಗ್ಗೆ ಅಸಮಾಧಾನ ಇಲ್ಲ. ಹಾಗಂತ ಇಲ್ಲಿರಲು ಆಗುತ್ತಿಲ್ಲ. ಬೇಷರತ್ತಾಗಿ ಬಿಜೆಪಿ ಸೇರುತ್ತಿದ್ದೇನೆ. ಹಣಕ್ಕಾಗಿಯೂ ಪಕ್ಷ ಬದಲಿಸುತ್ತಿಲ್ಲ ಎಂದು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್ನವರು ಯಾರೂ ಮನವೊಲಿಸಲು ಬರುವುದಿಲ್ಲ. ಅಧಿಕಾರ ಬಿಟ್ಟುಕೊಡುವುದಿಲ್ಲ. ಹಾಗಂತ ನಾನು ಬಿಜೆಪಿಗೆ ಸೇರಿದ ತಕ್ಷಣ ನನಗೇನೂ ಸ್ಥಾನಮಾನ ಸಿಗುವುದಿಲ್ಲ. ಆದರೆ ಇನ್ನು ಅಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದುಕೊಂಡಿದ್ದೇನೆ. ಶ್ರೀರಾಮುಲು ಹಾಗೂ ಆನಂದ್ ಸಿಂಗ್ ಜತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಮೊಳಕಾಲ್ಮೂರು ಸಂಸದ ಮತ್ತು ಸಚಿವ ಬಿ. ಶ್ರೀರಾಮುಲು ಜೊತೆ ಈ ಕುರಿತು ಅನಿಲ್ ಲಾಡ್ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಲು ಅನಿಲ್ ಲಾಡ್ ಪ್ರಯತ್ನ ನಡೆಸುತ್ತಿದ್ದಾರೆ. ಯಡಿಯೂರಪ್ಪ ಒಪ್ಪಿಗೆ ಪಡೆದ ಬಳಿಕ ಬಿಜೆಪಿ ಸೇರುವ ಕುರಿತು ಅವರು ಅಧಿಕೃತ ಘೋಷಣೆ ಮಾಡುವ ನಿರೀಕ್ಷೆ ಇದೆ.
ಅನಿಲ್ ಲಾಡ್ ಕಾಂಗ್ರೆಸ್ನಿಂದ ಎರಡುಬಾರಿ ಶಾಸಕರಾಗಿದ್ದವರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…