ಕಲಬುರಗಿ- ನಾನು ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಕಾಂಗ್ರೆಸ್ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಪುತ್ರ ಪ್ರಿಯಾಂಕ ಖರ್ಗೆ ಸಾಬೀತು ಮಾಡಬೇಕು. ಇಲ್ಲವೇ ಇವರ ವಿರುದ್ದ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಎಚ್ಚರಿಸಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಪದೇಪದೇ ಮಾರಾಟವಾಗಿದ್ದೀರಾ ಎಂದು ಆರೋಪ ಮಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ತುಂಬಾ ಬಲಿಷ್ಠರಿದ್ದಾರೆ, ಪವರ್‍ಫುಲ್ ಆನ್ ದಿ ಅರ್ಥ್. ದಿ ಗ್ರೇಟ್ ಲೀಡರ್ ಮಲ್ಲಿಕಾರ್ಜುನ ಖರ್ಗೆ ಅವರು, ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಲಿ.
ಜಗತ್ತಿನ ಯಾವುದೇ ಏಜೆನ್ಸಿ ಮೂಲಕ ತನಿಖೆ ಮಾಡಿಸಿ, ದುಡ್ಡು ಪಡೆದದ್ದು ಸಾಬೀತು ಮಾಡಿದರೆ, , ರಾಜಕೀಯ ನಿವೃತ್ತಿ ಪಡೆಯುವೆ. ಪದೇ ಪದೇ ಮಾರಾಟವಾಗಿದ್ದೀರ? ಎಂದು ಹೇಳಿಕೆ ಕೊಟ್ಟರೆ, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಜಾಧವ್ ಎಚ್ಚರಿಕೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆಗೆ ಹಣ ಬಲ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತು.
ಮಲ್ಲಿಕಾರ್ಜುನ ಖರ್ಗೆ ಕಾಲಿಗೆ ಬಿದ್ದು ಸುಭಾಷ್ ರಾಠೋಡ್ ಚಿಂಚೋಳಿ ಟಿಕೆಟ್ ಪಡೆದಿದ್ದಾನೆ. ಆತ ಖರ್ಗೆಗೆ ನಿಷ್ಟವಂತಾನೇ ಹೊರೆತು ಬೇರೆಯವರಿಗಲ್ಲ. ಇಟ್ ಈಸ್ ಫೈಟ್ ಬಿಟ್ವಿನ್ ಪ್ರಿಯಾಂಕ್ ಖರ್ಗೆ ಜಾಧವ್, ನಾಟ್ ಸುಭಾಷ್ ರಾಠೋಡ್. ಅವರು ಚುನಾವಣೆಯನ್ನು ವೈಯಕ್ತಿಕವಾಗಿ ತಗೆದುಕೊಂಡರೆ ನಾವು ನೋಡುತ್ತೇವೆ ಎಂದು ಹರಿಹಾಯ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…