ಬೆಂಗಳೂರು: ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣ ಪಡಸಾಲೆಯಲ್ಲಿ ಸಿದ್ದರಾಮಯ್ಯ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಕೆಲವು ಸಚಿವರು ಸಿದ್ಧರಾಮಯ್ಯ ಬಿಜೆಪಿ ಸೇರಿದರೂ ಸೇರಬಹದು ಎಂದಿದ್ದರು.
ಈ ವದಂತಿಗಳಿಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದಿದ್ದಾರೆ.
ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದು ಬಿಜೆಪಿಗೆ ವಲಸೆ ಹೋಗಿರುವವರಿಗೆ ಟಾಂಗ್ ಕೊಟ್ಟಿದ್ದಾರೆ.
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…
ಮಡ್‌ಗಾಂವ್ - ಮಂಗಳೂರು 'ವಂದೇ ಭಾರತ್' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್-ಮಡ್‌ಗಾಂವ್ ನಡುವೆ ಓಡುತ್ತಿದ್ದ…
ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…