ಮಂಡ್ಯ: ನಾನು ಬಿಜೆಪಿ ಸೇರ್ಪಡೆಯ ಬಗ್ಗೆ ಯೋಚನೆ ಮಾಡಿಲ್ಲ. ಬಿಜೆಪಿ ನಾಯಕರು ಸಹ ಈ ಬಗ್ಗೆ ಮಾತನಾಡಿದ್ದಾರೆ ನಾನು ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿ ಸೇರ್ಪಡೆ ವಿಚಾರ ಇಲ್ಲ. ಫ್ಲೆಕ್ಸ್ ನಲ್ಲಿ ಅವರವರ ಅಭಿಮಾನಕ್ಕೆ ಫೋಟೋ ಹಾಕಿದ್ದಾರೆ ಅಷ್ಟೇ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಚ್ಚಿದಾನಂದ ಗೆ ನನ್ನ ಬೆಂಬಲ ಇದೆ ಎನ್ನುವುದು ಸೀಕ್ರೆಟ್ ಇಲ್ಲ ಸಚ್ಚಿದಾನಂದಗೆ ನನ್ನ ಬೆಂಬಲ ಇದೆ ಎಂದು ಓಪನ್ ಆಗಿ ಘೋಷಣೆ ಮಾಡಿದ್ದೇನೆ. ಹೀಗಾಗಿ ಸಚ್ಚಿ ಬ್ಯಾನರ್ ನಲ್ಲಿ ನನ್ನ ಫೋಟೋ ಹಾಕಿಕೊಂಡಿದ್ದಾರೆ ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸಿಕೊಂಡರೆ ನಾನು ಏನು ಮಾಡೋಕೆ ಆಗಲ್ಲ ಎಂದರು.
ಪಕ್ಷ ಸೇರ್ಪಡೆಯ ಬಗ್ಗೆ ನಾನು ಯಾವುದೇ ಸಭೆ ಮಾಡುತ್ತಿಲ್ಲ, ನಾನು ಹೋದ ಕಡೆ ಜನರನ್ನು ಪಕ್ಷ ಸೇರ್ಪಡೆ ಬಗ್ಗೆ ಕೇಳ್ತಾ ಇದ್ದೀನಿ. ಜನರು ಸಹ ಈ ಬಗ್ಗೆ ಕೇಳ್ತಾ ಇದ್ದಾರೆ. ಜನರು ಸಹ ಸದ್ಯಕ್ಕೆ ಹೀಗೆ ಇರಿ ಎಂದು ಹೇಳುತ್ತಾ ಇದ್ದಾರೆ. ನಾನು ಯಾವುದೇ ನಿರ್ಧಾರ ಮಾಡಲ್ಲ, ಜನರು ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರ ಮಾಡ್ತಾರೆ. ಪಕ್ಷಕ್ಕೆ ಸೇರುವ ಪರಿಸ್ಥಿತಿ ಬಂದಾಗ ಹೇಗೆ ಮಾಡಬೇಕೆಂದು ಯೋಚನೆ ಮಾಡ್ತೀನಿ. ಯೋಗೇಶ್ವರ್ ಅವರಿಗೆ ಬಿಜೆಪಿಗೆ ನಾನು ಬರಬೇಕು ಎಂಬ ಆಸೆ ಇದೆ ಅದೇ ರೀತಿ ಹಲವು ನಾಯಕರು ನನ್ನನ್ನು ಮಾತಾಡಿಸಿದ್ದಾರೆ. ಇಲ್ಲಿಯವರೆಗೆ ನಾನು ಆ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…