ಲಂಡನ್: ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಯ ನಾಲ್ಕನೇ ಸುತ್ತಿನಲ್ಲೂ ರಿಷಿ ಸುನಕ್ ಮುನ್ನಡೆ ಸಾಧಿಸಿದ್ದು, ಅಂತಿಮ ಸುತ್ತಿನತ್ತ ದಾಪುಗಾಲಿಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ರಿಷಿ ಸುನಕ್ ಅವರು ಮಹತ್ವದ ಶಪಥ ಮಾಡಿದ್ದಾರೆ.
ನಾನು ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ ಎಂದಿದ್ದಾರೆ.
ಪ್ರಧಾನಿ ಬೋರಿಸ್ ಜಾನ್ಸನ್ರ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಧಾನಿ ರೇಸ್ನಲ್ಲಿ ಬ್ರಿಟನ್ನ ಮಾಜಿ ಹಣಕಾಸು ಸಚಿವರೂ ಆದ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಮುಂಚೂಣಿಯಲ್ಲಿದ್ದಾರೆ. ಅಂತಿಮ ಸುತ್ತಿಗೆ ಇಬ್ಬರು ಸ್ಪರ್ಧಿಗಳು ತೆರಳಿದ್ದು, ಸದ್ಯದ ಮಾಹಿತಿ ಪ್ರಕಾರ ಇವರ ಆಯ್ಕೆ ಬಹುತೇಕ ಖಚಿತವಾಗಿದೆ. ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದಲ್ಲಿ ರಿಷಿ ಸುನಕ್ ಅವರಿಗೆ ಒಳ್ಳೆಯ ಹೆಸರಿದೆ.
‘ಬ್ರಿಟನ್-ಚೀನಾ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಪಷ್ಟ ಮತ್ತು ಪ್ರಾಯೋಗಿಕ ದೃಷ್ಟಿಕೋನ ಹೊಂದಿರುವ ಏಕೈಕ ಅಭ್ಯರ್ಥಿ ರಿಷಿ ಸುನಕ್’ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಹೇಳಿತ್ತು. ಇನ್ನು ಚೀನಾ ಮತ್ತು ರಷ್ಯಾ ವಿಚಾರದಲ್ಲಿ ರಿಷಿ ಸುನಕ್ ದುರ್ಬಲರಾಗಿದ್ದಾರೆ ಎಂದು ಅವರ ಪ್ರತಿಸ್ಪರ್ಧಿ ಲಿಜ್ ಟ್ರುಸ್ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಿಷಿ ಸುನಕ್, ‘ಚೀನಾದ ಸಂಸ್ಕೃತಿ ಮತ್ತು ಭಾಷಾ ಕಾರ್ಯಕ್ರಮಗಳ ಮೂಲಕ ಚೀನಿ ಪ್ರಭಾವ ಹೆಚ್ಚಾಗದಂತೆ ತಡೆಯಲು ಬ್ರಿಟನ್ನಲ್ಲಿರುವ ಎಲ್ಲ 30 ಕನ್ಫ್ಯೂಷಿಯಸ್ ಸಂಸ್ಥೆಗಳನ್ನು ಮುಚ್ಚುವೆ. ಚೀನಿ ಕಮ್ಯುನಿಷ್ಟ್ ಪಕ್ಷವನ್ನ ನಮ್ಮ ವಿಶ್ವವಿದ್ಯಾಲಯದಗಳಿಂದ ಹೊರಹಾಕಲಾಗವುದು. ಚೀನಿ ಬೇಹಗಾರಿಕೆ ಎದುರಿಸಲು ಬ್ರಿಟನ್ ದೇಶೀಯ ಬೇಹುಗಾರಿಕೆ ಸಂಸ್ಥೆ ಎಂಐ5 ಅನ್ನು ಬಳಸಲಾಗವುದು. ಬ್ರಿಟೀಷ್ ಸ್ವತ್ತುಗಳನ್ನು ಚೀನಿಯರ ಸ್ವಾಧೀನಕ್ಕೆ ಹೋಗದಂತೆ ಎಚ್ಚರ ವಹಿಸಲಾಗುವುದು’ ಎಂದು ಘೋಷಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…