Featured

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​ – Vishwanews24

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ : ರಿಷಿ ಸುನಕ್​

ಲಂಡನ್​: ಬ್ರಿಟನ್​ ಪ್ರಧಾನಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಯ ನಾಲ್ಕನೇ ಸುತ್ತಿನಲ್ಲೂ ರಿಷಿ ಸುನಕ್​ ಮುನ್ನಡೆ ಸಾಧಿಸಿದ್ದು, ಅಂತಿಮ ಸುತ್ತಿನತ್ತ ದಾಪುಗಾಲಿಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ರಿಷಿ ಸುನಕ್​ ಅವರು ಮಹತ್ವದ ಶಪಥ ಮಾಡಿದ್ದಾರೆ.

ನಾನು ಬ್ರಿಟನ್​ ಪ್ರಧಾನಿಯಾಗಿ ಆಯ್ಕೆಯಾದರೆ ಚೀನಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ ಎಂದಿದ್ದಾರೆ.

ಪ್ರಧಾನಿ ಬೋರಿಸ್​ ಜಾನ್ಸನ್​​ರ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಧಾನಿ ರೇಸ್​ನಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವರೂ ಆದ ಇನ್ಫೋಸಿಸ್​ ಸಹ ಸಂಸ್ಥಾಪಕ ಎನ್.ಆರ್​. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ ಮುಂಚೂಣಿಯಲ್ಲಿದ್ದಾರೆ. ಅಂತಿಮ ಸುತ್ತಿಗೆ ಇಬ್ಬರು ಸ್ಪರ್ಧಿಗಳು ತೆರಳಿದ್ದು, ಸದ್ಯದ ಮಾಹಿತಿ ಪ್ರಕಾರ ಇವರ ಆಯ್ಕೆ ಬಹುತೇಕ ಖಚಿತವಾಗಿದೆ. ಆಡಳಿತಾರೂಢ ಕನ್ಸರ್ವೇಟಿವ್​ ಪಕ್ಷದಲ್ಲಿ ರಿಷಿ ಸುನಕ್​ ಅವರಿಗೆ ಒಳ್ಳೆಯ ಹೆಸರಿದೆ.

‘ಬ್ರಿಟನ್​-ಚೀನಾ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಪಷ್ಟ ಮತ್ತು ಪ್ರಾಯೋಗಿಕ ದೃಷ್ಟಿಕೋನ ಹೊಂದಿರುವ ಏಕೈಕ ಅಭ್ಯರ್ಥಿ ರಿಷಿ ಸುನಕ್’​ ಎಂದು ಚೀನಾದ ಗ್ಲೋಬಲ್​ ಟೈಮ್ಸ್​ ಹೇಳಿತ್ತು. ಇನ್ನು ಚೀನಾ ಮತ್ತು ರಷ್ಯಾ ವಿಚಾರದಲ್ಲಿ ರಿಷಿ ಸುನಕ್ ದುರ್ಬಲರಾಗಿದ್ದಾರೆ ಎಂದು ಅವರ ಪ್ರತಿಸ್ಪರ್ಧಿ ಲಿಜ್​ ಟ್ರುಸ್​ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಿಷಿ ಸುನಕ್, ‘ಚೀನಾದ ಸಂಸ್ಕೃತಿ ಮತ್ತು ಭಾಷಾ ಕಾರ್ಯಕ್ರಮಗಳ ಮೂಲಕ ಚೀನಿ ಪ್ರಭಾವ ಹೆಚ್ಚಾಗದಂತೆ ತಡೆಯಲು ಬ್ರಿಟನ್​ನಲ್ಲಿರುವ ಎಲ್ಲ 30 ಕನ್ಫ್ಯೂಷಿಯಸ್ ​ಸಂಸ್ಥೆಗಳನ್ನು ಮುಚ್ಚುವೆ. ಚೀನಿ ಕಮ್ಯುನಿಷ್ಟ್​ ಪಕ್ಷವನ್ನ ನಮ್ಮ ವಿಶ್ವವಿದ್ಯಾಲಯದಗಳಿಂದ ಹೊರಹಾಕಲಾಗವುದು. ಚೀನಿ ಬೇಹಗಾರಿಕೆ ಎದುರಿಸಲು ಬ್ರಿಟನ್​ ದೇಶೀಯ ಬೇಹುಗಾರಿಕೆ ಸಂಸ್ಥೆ ಎಂಐ5 ಅನ್ನು ಬಳಸಲಾಗವುದು. ಬ್ರಿಟೀಷ್​ ಸ್ವತ್ತುಗಳನ್ನು ಚೀನಿಯರ ಸ್ವಾಧೀನಕ್ಕೆ ಹೋಗದಂತೆ ಎಚ್ಚರ ವಹಿಸಲಾಗುವುದು’ ಎಂದು ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

9 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

10 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

10 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

11 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

11 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago