Featured

“ನಾನು ಮತ್ತು ಮಹಾಭಾರತದ ಕರ್ಣ ಇಬ್ಬರೂ ಸಾಂದರ್ಭಿಕ ಶಿಶುಗಳು,” : ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು:”ನಾನು ಮತ್ತು ಮಹಾಭಾರತದ ಕರ್ಣ ಇಬ್ಬರೂ ಸಾಂದರ್ಭಿಕ ಶಿಶುಗಳು,” ಎಂಬ ಮಾತನ್ನು ಸದನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳುವ ಮೂಲಕ ಕರ್ಣನಿಗೆ ತಮ್ಮನ್ನು ಹೋಲಿಸಿಕೊಂಡರು.

ಶುಕ್ರವಾರ ಕರ್ನಾಟಕ ರಾಜ್ಯದ ನೂತನ ಬಜೆಟ್​ ಮಂಡನೆ ಮಾಡಿದ ನಂತರ ಇಂದು ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಕರ್ಣ ಕೂಡ ಸಾಂದರ್ಭಿಕ ಶಿಶುವೇ ಎಂದಿದ್ದಾರೆ. ವಿರೋಧ ಪಕ್ಷದ ನಾಯಕರು ಈ ಸರ್ಕಾರಕ್ಕೆ ಮತ್ತು ಸಿಎಂ ಆದ ತಮಗೆ ಅಪ್ಪ – ಅಮ್ಮ ಇಲ್ಲವೆಂದು ಹೀಗಳೆಯುತ್ತಿದ್ದಾರೆ. ಆದರೆ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರೇ ಈ ಸರ್ಕಾರದ ಅಪ್ಪ – ಅಮ್ಮಂದಿರು, ಎಂದು ಕುಮಾರಸ್ವಾಮಿ ಹೇಳಿದರು.

ವಿರೋಧ ಪಕ್ಷದ ನಾಯಕರು ಪದೇ ಪದೇ ಸಮ್ಮಿಶ್ರ ಸರ್ಕಾರವನ್ನು ಅಪವಿತ್ರ ಮೈತ್ರಿ ಸರ್ಕಾರ ಎಂದು ಬಣ್ಣಿಸುತ್ತಿವೆ. ಇದಕ್ಕೆ ಉತ್ತರಿಸಿದ ಕುಮಾರಸ್ವಾಮಿ 12 ವರ್ಷಗಳ ಹಿಂದೆ 2006ರಲ್ಲಿ ಜೆಡಿಎಸ್​ನಲ್ಲಿ 38 ಶಾಸಕರು ಮಾತ್ರ ಇದ್ದರು. ಆಗ ಸರ್ಕಾರ ಮಾಡಲು ಬಿಜೆಪಿ 84 ಶಾಸಕರು ಬೆಂಬಲ ಕೊಟ್ಟಾಗ ಪ್ರಜಾಪ್ರಭುತ್ವ ಕಗ್ಗೊಲೆ ಆಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಜತೆಗೆ ಆದ ಯಾರು ಮತ್ತು ಯಾಕೆ ಬೆಂಬಲ ಕೊಟ್ಟಿರಿ ಎಂಬುದನ್ನು ಮರೆ ಬಿಟ್ಟಿದ್ದೀರಾ ಎಂಬ ಪ್ರಶ್ನೆಯನ್ನು ಬಿ.ಎಸ್​. ಯಡಿಯೂರಪ್ಪ ಅವರಿಗೆ ಕೇಳಿದರು.

ಅಂದು ಧರ್ಮಸಿಂಗ್ ಸರ್ಕಾರ ಅಸ್ತಿರಗೊಳಿಸಲು ಕೆಲವರು ಪ್ರಯತ್ನ ನಡೆಸಿದ್ದರು. ಚುನಾವಣೆಗೆ ಹೋಗೋಣ, ಈ ಸಮ್ಮಿಶ್ರ ಸರ್ಕಾರ ಸಾಕು ಎಂದು ಸೋನಿಯಾ ಗಾಂಧಿ ಜೊತೆ ಚರ್ಚಿಸಲು ದೇವೇಗೌಡರು ಮುಂದಾಗಿದ್ದರು. ಆದರೆ ಕೆಲ ಶಾಸಕರು ಬೇಡ ಎಂಬ ಸಲಹೆ ನೀಡಿದರು. ಆಗ ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕ ಮಾಡಿದ್ದರು. ದೇವರು ಕೊಟ್ಟ ಒಂದು ಆಶೀರ್ವಾದ , ಕಾಂಗ್ರೆಸ್ ಶಾಸಕರು ಕೊಟ್ಟ ಸಹಕಾರದಿಂದ ಸಿಎಂ ಆಗಿದ್ದೇನೆ ಎಂದು ಕುಮಾರಸ್ವಾಮಿ ಸದನದಲ್ಲಿ ಹೇಳಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago