Featured

ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ : ಬಿ.ವೈ.ವಿಜಯೇಂದ್ರ – vishwanews24

ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ : ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ​ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶಯ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ.ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕು ಎಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ. ಅದಾದನಂತರ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.

ಕಳೆದ ವರ್ಷದಿಂದ ನಾನು ಯಾರು ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಬಳಿಕ ಎಲ್ಲ ಸಮಸ್ಯೆಗಳು ಬಗೆ ಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

24 minutes ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

1 hour ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

2 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

2 hours ago

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…

2 hours ago

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

2 hours ago