ಶಿವಮೊಗ್ಗ: ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶಯ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ.ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕು ಎಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ. ಅದಾದನಂತರ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.
ಕಳೆದ ವರ್ಷದಿಂದ ನಾನು ಯಾರು ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ. ಬಳಿಕ ಎಲ್ಲ ಸಮಸ್ಯೆಗಳು ಬಗೆ ಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…