ಬಳ್ಳಾರಿ : ನಾನು ಮತ್ತೆ ಮುಖ್ಯಮಂತ್ರಿಯಾದರೇ ಉಚಿತವಾಗಿ 10ಕೆಜಿ ಅಕ್ಕಿ ವಿತರಿಸುವುದಾಗಿ ಮಾಜಿ ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿಯಾದ ಸಮಯದಲ್ಲಿ ಅತೀ ಹೆಚ್ಚು ಯೋಜನೆಗಳನ್ನು ರೂಪಿಸಿದ್ದೇನೆ. ಅದರಲ್ಲೂ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚು ಬಡ ಕುಟುಂಬಗಳಿಗೆ ಪಡಿತರ ಧಾನ್ಯ ಲಭ್ಯವಾಗುವಂತೆ ಮಾಡಿದ್ದೇನೆ.
ಬಿಜೆಪಿ ಸರ್ಕಾರವಿದ್ದಾಗ ಯಾರಾದರೂ ಇಂತಹ ಯೋಜನೆ ತಂದಿದ್ದರಾ.? ಇಲ್ಲಿ ನೆರೆದಿರುವ ಹೆಣ್ಣು ಮಕ್ಕಳೇ ಕೈ ಎತ್ತಿ ಹೇಳಿ ಎಷ್ಟು ಜನರಿಗೆ ಅನ್ನಭಾಗ್ಯ ಯೋಜನೆಯ ಸೌಲಭ್ಯ ಸಿಗ್ತಾ ಇದೆ ಎಂದು ಸಭೆಯಲ್ಲಿ ನೆರೆದಿದ್ದವರನ್ನು ಪ್ರಶ್ನೆ ಮಾಡಿದ ಸಿದ್ದರಾಮಯ್ಯ, ಮುಂದೆ ನಾನು ಸಿಎಂ ಆದ್ರೇ, 10 ಕೆಜಿ ಅಕ್ಕಿಯನ್ನು ಕೊಡುವುದಾಗಿ ಘೋಷಣೆ ಮಾಡಿದರು.
ಅಂದಹಾಗೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ ನಿನ್ನೆಯಷ್ಟೇ ಗದಗದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಸಭೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆಯೂ, ತಾವು ಮತ್ತೆ ಮುಖ್ಯಮಂತ್ರಿಯಾದರೇ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುವುದಾಗಿ ಘೋಷಣೆ ಮಾಡಿದ್ದರು. ಇದನ್ನು ಇಂದು ಬಳ್ಳಾರಿಯ ಸಭೆಯಲ್ಲೂ ಪುನರ್ ಉಚ್ಚರಿಸಿರುವ ಅವರು, ಮತದಾರರನ್ನು ಸೆಳೆಯಲು ಮತ್ತೆ ಅನ್ನಭಾಗ್ಯ ಅಕ್ಕಿಯನ್ನು ಹೆಚ್ಚು ಮಾಡುವ ಮಾತನ್ನಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…