ನಾನು ಮದುವೆಯಾಗುವ ಹುಡುಗಿಗೆ ಸಿನಿಮಾರಂಗದಲ್ಲಿ ಯಾವುದೇ ಲಿಂಕ್ ಇಲ್ಲ : ನಿಖಿಲ್ -Vishwanews24

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಬಗ್ಗೆ ಗಾಸಿಪ್ ಹರಿದಾಡುತ್ತಿದೆ. ಈಗ ಸ್ವತಃ ನಿಖಿಲ್ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ.

ಬುಧವಾರ ನಿಖಿಲ್ ತಮ್ಮ 30ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಮಾಧ್ಯಮವೊಂದಕ್ಕೆ ಮಾತನಾಡಿದ ಅವರು ಅವರು, ನನ್ನ ಮದುವೆ ಬಗ್ಗೆ ಶೀಘ್ರದಲ್ಲೇ ಅನೌನ್ಸ್ ಮಾಡುತ್ತೇನೆ. ಅಲ್ಲಿಯವರೆಗೂ ಅತುರ ಬೇಡ. ನನ್ನ ಮದುವೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು, ಆ ಸುದ್ದಿಗಳೆಲ್ಲ ಸುಳ್ಳು. ಕಳೆದ ಒಂದು ವರ್ಷದಿಂದ ನಮ್ಮ ಮನೆಯಲ್ಲಿ ನನಗೆ ಹುಡುಗಿಯನ್ನು ಹುಡುಕುತ್ತಿದ್ದು, ಸದ್ಯದಲ್ಲೇ ಫೈನಲ್ ಆಗಲಿದೆ. ಆಕೆ ಯಾರು ಎನ್ನುವುದನ್ನು ಸ್ವತಃ ನಾನೇ ತಿಳಿಸುತ್ತೇನೆ ಎಂದು ಗಾಸಿಪ್‍ಗಳಿಗೆಲ್ಲ ಉತ್ತರ ನೀಡಿದ್ದಾರೆ.

ನಾನು ಮದುವೆಯಾಗುವ ಹುಡುಗಿ ಸಿನಿಮಾರಂಗದಲ್ಲಿ ಯಾವುದೇ ಲಿಂಕ್ ಇಲ್ಲ. ಆಕೆಗೆ ಚಿತ್ರರಂಗದ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಆಕೆ ಸರಳವಾದ ಕನ್ನಡದ ಹುಡುಗಿಯಾಗಿದ್ದು, ನಮ್ಮ ಸಂಸ್ಕೃತಿ ಬಗ್ಗೆ ತುಂಬಾ ಚೆನ್ನಾಗಿ ತಿಳಿದುಕೊಂಡಿದ್ದಾಳೆ. ಅಪ್ಪ-ಅಮ್ಮ ನನ್ನ ಮದುವೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರ ನಿರ್ಧಾರವೇ ಅಂತಿಮ ಎಂದು ನಿಖಿಲ್ ತಿಳಿಸಿದ್ದಾರೆ.

ವೈಯಕ್ತಿಕ ವಿಚಾರದ ಹೊರತಾಗಿ ನಿಖಿಲ್ ತಮ್ಮ ಚಿತ್ರಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ನಾನು ಎರಡು ಚಿತ್ರಗಳಲ್ಲಿ ನಟಿಸಲಿದ್ದು, ಈ ವರ್ಷ ಆ ಎರಡು ಚಿತ್ರಗಳು ಬಿಡುಗಡೆಯಾಗಲಿದೆ ಎಂದು ನಿಖಿಲ್ ಹೇಳಿದ್ದಾರೆ. ನಿಖಿಲ್ ಬುಧವಾರ ತಮ್ಮ ಹುಟ್ಟುಹಬ್ಬವನ್ನು ತಂದೆಯ ಆಶೀರ್ವಾದ ಪಡೆಯುವ ಮೂಲಕ ಬಹಳ ಸರಳವಾಗಿ ಆಚರಿಸಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago