ಕೋಲ್ಕತಾ: ನನ್ನನ್ನೂ ಜೈಲಿಗೆ ಅಟ್ಟಿದರೂ ನಾನು ಮಾತ್ರ ಬಿಜೆಪಿಗೆ, ಮೋದಿ ಸರ್ಕಾರಕ್ಕೆ ತಲೆಬಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ವಿದ್ಯಾರ್ಥಿಗಳ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಪ್ರಮುಖ ಸಂಸ್ಥೆಗಳನ್ನು ನಿವೃತ್ತ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಅವರು ಸರ್ಕಾರದ “ಯೆಸ್ ಮೆನ್’ಗಳಾಗಿ ಎಂದು ಕಾರ್ಯನಿರ್ವಹಿಸುತ್ತಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಭಿನ್ನಾಭಿಪ್ರಾಯದ ಧ್ವನಿಯನ್ನು ಮೌನಗೊಳಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿವೇಚನಾರಹಿತ ಶಕ್ತಿಯನ್ನು ಬಳಸುತ್ತಿದೆ.
ಕೇಂದ್ರ ಸರ್ಕಾರದ ವಿರುದ್ಧ ನನ್ನ ಧ್ವನಿ ಎತ್ತಿದ್ದಕ್ಕೆ ಅವರು ಬೇಕಿದ್ದರೆ ನನ್ನನ್ನು ಬಂಧಿಸಲಿ. ಆದರೆ ಯಾವುದೇ ಕಾರಣಕ್ಕೂ ನಾನು ಬಿಜೆಪಿಯ ಮುಂದೆ ತಲೆಬಾಗುವುದಿಲ್ಲ. ಈ ಮೂಲಕ ಕಾಶ್ಮೀರದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಹೊಣೆಗಾರಿಕೆಯೇ ಇಲ್ಲದ ನಿವೃತ್ತ ವ್ಯಕ್ತಿಗಳನ್ನು ಪ್ರಮುಖ ಸಂಸ್ಥೆಗಳ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಕಿಡಿಕಾರಿದರು.
ದೇಶವು ಅಧ್ಯಕ್ಷೀಯ ಸರ್ಕಾರದತ್ತ ಸಾಗುತ್ತಿದ್ದು, ಇಲ್ಲಿ ಪ್ರಜಾಪ್ರಭುತ್ವಕ್ಕೆ ಸ್ಥಳವೇ ಇಲ್ಲದಂತಾಗುತ್ತಿದೆ. ಕರ್ನಾಟಕದಲ್ಲಿ ಸರ್ಕಾರವನ್ನು ಉರುಳಿಸಲಾಯಿತು. ಆದರೆ ಅದರ ಬಗ್ಗೆ ಒಂದೇ ಒಂದು ಮಾತನ್ನಾಡಲಿಲ್ಲ. ಬಂಗಾಳದ ನಂತರದಲ್ಲಿ ಕೇಂದ್ರ ಸರ್ಕಾರವು ವಿಪಕ್ಷ ನಾಯಕರನ್ನು ಬೆದರಿಸುತ್ತಿದೆ ಅಥವಾ ಹಣದಿಂದ ಅವರನ್ನು ಕೊಂಡುಕೊಳ್ಳಲಾಗುತ್ತಿದೆ. ನಾವು ಅದರ ನೀತಿ ಮತ್ತು ಒಡಕು ರಾಜಕೀಯವನ್ನು ವಿರೋಧಿಸುತ್ತಿದ್ದೇವೆ ಎಂದು ಮಮತಾ ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…