Featured

ನಾನು ಮೊದಲಿನಿಂದಲೂ RSS ಅನ್ನು ವಿರೋಧಿಸುತ್ತೇನೆ : ಸಿ.ಎಂ.ಸಿದ್ದರಾಮಯ್ಯ – vishwanews24

ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ :  ಸಿಎಂ

ಬೆಂಗಳೂರು :ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.

ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ಈಗ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

9 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

10 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

10 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

10 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

11 hours ago