ಮಂಗಳೂರು: “ಹಿಂದುತ್ವ, ಆರ್ಥಿಕ ಹಾಗೂ ವಿದೇಶಾಂಗ ನೀತಿಗಳು ಸೇರಿದಂತೆ ಬಿಜೆಪಿ ತನ್ನ ಮೂಲ ಸಿದ್ದಾಂತದಿಂದ ಹಿಂದೆ ಸರಿಯುತ್ತಿದ್ದು, ಈ ಸಮಸ್ಯೆಗಳನ್ನು ಮೊದಲು ಪರಿಹರಿಸಬೇಕು ಎಂಬುದು ನನ್ನ ನಿಲುವು. ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುವುದಿಲ್ಲ ಆದರೆ ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಕೇಂದ್ರ ಮಾಜಿ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ಧಾರೆ.
ಉಡುಪಿ ಹಾಗೂ ಶೃಂಗೇರಿ ಭೇಟಿಯ ಹಿನ್ನೆಲೆ ಮಂಗಳವಾರ ಮಂಗಳೂರಿಗೆ ಆಗಮಿಸಿದ ವೇಳೆ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎಂ. ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ಚೀನಾದ ಆಕ್ರಮಣಕಾರಿ ನೀತಿಯ ವಿರುದ್ದ ನರೇಂದ್ರ ಮೋದಿ ಸರ್ಕಾರದ ದುರ್ಬಲ ನಿಲುವಿನ ಕುರಿತು ತೀವ್ರ ಅಸಮಾಧನ ಹೊಂದಿದ್ದೇನೆ. ಉತ್ತರಾಖಂಡದಲ್ಲಿ ಪುರಾತನ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನಗಳ ವಿರುದ್ಧ ಹೋರಾಡಿದ್ದೇನೆ. ರಾಮಸೇತು ಒಡೆಯುವುದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದೆ. ಮೋದಿ ಸರ್ಕಾರ ರಾಮಸೇತುವನ್ನು ಪಾರಂಪರಿಕ ತಾಣವನ್ನಾಗಿ ಮಾಡಿಲ್ಲ. ಈ ಬಗ್ಗೆ ನನ್ನ ಅಸಮಾಧಾನವನ್ನು ಪತ್ರಗಳ ಮೂಲಕ ಹಲವಾರು ಬಾರಿ ಗಮನಕ್ಕೆ ತಂದಿದ್ದೇನೆ” ಎಂದಿದ್ದಾರೆ.
“ನಾನು ಜನಸಂಘದೊಂದಿಗೆ ಇದ್ದವನು. ಮೋದಿ ನೀತಿಯ ಕುರಿತು ಅಸಮಾಧಾನವಿದೆಯೇ ಹೊರತು ಬಿಜೆಪಿಯ ಬಗ್ಗೆ ಅಲ್ಲ. ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಇನ್ನು ಮುಂದೆಯೂ ನಾನು ಬಿಜೆಪಿಯಲ್ಲೇ ಇರುತ್ತೇನೆ” ಎಂದು ಹೇಳಿದ್ದಾರೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…