ನಾನು ಯಾರಿಗೂ ಅಗೌರವ ತೋರಿಲ್ಲ, ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ : ಟ್ರೋಫಿ ಮೇಲೆ ಕಾಲಿಟ್ಟಿದ್ದಕ್ಕೆ ಮಿಚೆಲ್ ಸ್ಪಷ್ಟನೆ – vishwanews24

Featured, ರಾಷ್ಟ್ರ ನ್ಯೂಸ್

ನಾನು ಯಾರಿಗೂ ಅಗೌರವ ತೋರಿಲ್ಲ, ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ : ಟ್ರೋಫಿ ಮೇಲೆ ಕಾಲಿಟ್ಟಿದ್ದಕ್ಕೆ ಮಿಚೆಲ್ ಸ್ಪಷ್ಟನೆ

ನವದೆಹಲಿ: ವಿಶ್ವಕಪ್ 2023 ರ ಟ್ರೋಫಿ ಮೇಲೆ ಕಾಲಿಟ್ಟು ಭಾರೀ ವಿವಾದಕ್ಕೀಡಾದ ಬಳಿಕ ಇದೀಗ ಆಸೀಸ್ ತಂಡದ ಆಲ್ ರೌಂಡರ್ ಮಿಚೆಲ್ ಮಾರ್ಷ್ ಸ್ಪಷ್ಟನೆ ನೀಡಿದ್ದಾರೆ.

ನಾನು ಯಾರಿಗೂ ಅಗೌರವ ತೋರಿಲ್ಲ. ನಾನು ಅದರ ಬಗ್ಗೆ ಹೆಚ್ಚು ಯೋಚಿಸಿಲ್ಲ. ಆ ಫೋಟೋ ಸಾಕಷ್ಟು ವೈರಲ್ ಆಗಿದೆ ಎಂದು ಹಲವರು ನನ್ನ ಗಮನಕ್ಕೆ ತಂದಿದ್ದರು. ಆದರೆ ನಾನು ಅದನ್ನು ನೊಡಲು ಹೋಗಿಲ್ಲ. ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ ಎಂದು ಮಾರ್ಷ್ ತಿಳಿಸಿದ್ದಾರೆ.

ನ.19 ರಂದು ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ  ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 6 ವಿಕೆಟ್‍ಗಳಿಂದ ಭಾರತ ತಂಡವನ್ನು ಮಣಿಸಿತ್ತು. ಈ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಸತತ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.

ಕರಾವಳಿ ಜಿಲ್ಲೆಗಳಲ್ಲಿ ಡಿ. 5ರವರೆಗೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ಚಿತ್ರಗಳನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು.

Leave a Reply