ನವದೆಹಲಿ: ವಿಶ್ವಕಪ್ 2023 ರ ಟ್ರೋಫಿ ಮೇಲೆ ಕಾಲಿಟ್ಟು ಭಾರೀ ವಿವಾದಕ್ಕೀಡಾದ ಬಳಿಕ ಇದೀಗ ಆಸೀಸ್ ತಂಡದ ಆಲ್ ರೌಂಡರ್ ಮಿಚೆಲ್ ಮಾರ್ಷ್ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾರಿಗೂ ಅಗೌರವ ತೋರಿಲ್ಲ. ನಾನು ಅದರ ಬಗ್ಗೆ ಹೆಚ್ಚು ಯೋಚಿಸಿಲ್ಲ. ಆ ಫೋಟೋ ಸಾಕಷ್ಟು ವೈರಲ್ ಆಗಿದೆ ಎಂದು ಹಲವರು ನನ್ನ ಗಮನಕ್ಕೆ ತಂದಿದ್ದರು. ಆದರೆ ನಾನು ಅದನ್ನು ನೊಡಲು ಹೋಗಿಲ್ಲ. ಟೀಕಿಸುವಂಥದ್ದು ಅದರಲ್ಲಿ ಏನೂ ಇಲ್ಲ ಎಂದು ಮಾರ್ಷ್ ತಿಳಿಸಿದ್ದಾರೆ.
ನ.19 ರಂದು ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 6 ವಿಕೆಟ್‍ಗಳಿಂದ ಭಾರತ ತಂಡವನ್ನು ಮಣಿಸಿತ್ತು. ಈ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಸತತ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.
ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ಚಿತ್ರಗಳನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ಕೊಟ್ಟಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…