Featured

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ

ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು ಹೆದರುವುದಿಲ್ಲ. ಇದೇ ಮುಂಬರುವ ಡಿಸೆಂಬರ್‌ನಲ್ಲಿ ನಾನು ನನ್ನ ಪಕ್ಷದ ಸಹೋದ್ಯೋಗಿಗಳೊಂದಿಗೆ ತಾಯ್ನಾಡಿಗೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿಸದ್ಯ ತೀವ್ರ ರಾಜಕೀಯ ಬಿಕ್ಕಟ್ಟು ಹಾಗೂ ಅವರ ವಿರುದ್ಧ ಕಾನೂನು ಕ್ರಮಗಳ ತೂಗುಗತ್ತಿ ಇದ್ದಾಗಲೂ ಶೇಖ್ ಹಸೀನಾ ತಾಯ್ನಾಡಿಗೆ ಮರಳುವ ದೃಢ ನಿರ್ಧಾರ ಪ್ರಕಟಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶಕ್ಕೆ ಹೋದರೆ ನನ್ನನ್ನು ಜೈಲಿಗೆ ಹಾಕಬಹುದು ಅಥವಾ ಜೀವಕ್ಕೇ ಅಪಾಯ ಉಂಟಾಗಬಹುದು ಎಂಬ ಅರಿವು ನನಗಿದೆ. ಆದರೂ ನಾನು ಡಿಸೆಂಬರ್‌ನಲ್ಲಿ ಬಾಂಗ್ಲಾಕ್ಕೆ ಹೋಗುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಪ್ರಸ್ತುತ ಇರುವ ಮಧ್ಯಂತರ ಸರ್ಕಾರದ ವಿರುದ್ಧ ತಮ್ಮ ರಾಜಕೀಯ ಹೋರಾಟವನ್ನು ಮತ್ತೆ ಆರಂಭಿಸುವ ಮುನ್ಸೂಚನೆ ನೀಡಿದ್ದಾರೆ. ನನ್ನ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ನನ್ನ ಸಾವು ಬಂದರೆ ಅದು ನನ್ನ ಸ್ವಂತ ನೆಲದಲ್ಲಿ ಆಗಬೇಕು. ನನ್ನ ಹೆತ್ತವರನ್ನು ಸಮಾಧಿ ಮಾಡಿದ ಮತ್ತು ಅವರ ರಕ್ತ ಚೆಲ್ಲಿದ ಸ್ಥಳದಲ್ಲಿ ಬರಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು.

ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಶೇಖ್‌ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

7 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

10 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

10 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

11 hours ago