ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು ಹೆದರುವುದಿಲ್ಲ. ಇದೇ ಮುಂಬರುವ ಡಿಸೆಂಬರ್‌ನಲ್ಲಿ ನಾನು ನನ್ನ ಪಕ್ಷದ ಸಹೋದ್ಯೋಗಿಗಳೊಂದಿಗೆ ತಾಯ್ನಾಡಿಗೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿಸದ್ಯ ತೀವ್ರ ರಾಜಕೀಯ ಬಿಕ್ಕಟ್ಟು ಹಾಗೂ ಅವರ ವಿರುದ್ಧ ಕಾನೂನು ಕ್ರಮಗಳ ತೂಗುಗತ್ತಿ ಇದ್ದಾಗಲೂ ಶೇಖ್ ಹಸೀನಾ ತಾಯ್ನಾಡಿಗೆ ಮರಳುವ ದೃಢ ನಿರ್ಧಾರ ಪ್ರಕಟಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶಕ್ಕೆ ಹೋದರೆ ನನ್ನನ್ನು ಜೈಲಿಗೆ ಹಾಕಬಹುದು ಅಥವಾ ಜೀವಕ್ಕೇ ಅಪಾಯ ಉಂಟಾಗಬಹುದು ಎಂಬ ಅರಿವು ನನಗಿದೆ. ಆದರೂ ನಾನು ಡಿಸೆಂಬರ್‌ನಲ್ಲಿ ಬಾಂಗ್ಲಾಕ್ಕೆ ಹೋಗುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಪ್ರಸ್ತುತ ಇರುವ ಮಧ್ಯಂತರ ಸರ್ಕಾರದ ವಿರುದ್ಧ ತಮ್ಮ ರಾಜಕೀಯ ಹೋರಾಟವನ್ನು ಮತ್ತೆ ಆರಂಭಿಸುವ ಮುನ್ಸೂಚನೆ ನೀಡಿದ್ದಾರೆ. ನನ್ನ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ನನ್ನ ಸಾವು ಬಂದರೆ ಅದು ನನ್ನ ಸ್ವಂತ ನೆಲದಲ್ಲಿ ಆಗಬೇಕು. ನನ್ನ ಹೆತ್ತವರನ್ನು ಸಮಾಧಿ ಮಾಡಿದ ಮತ್ತು ಅವರ ರಕ್ತ ಚೆಲ್ಲಿದ ಸ್ಥಳದಲ್ಲಿ ಬರಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು.
ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದೆ.
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…