ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ : ಸಚಿವ ವಿ.ಸೋಮಣ್ಣ ಸ್ಪಷ್ಟನೆ – Vishwanews24
ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ : ಸಚಿವ ವಿ.ಸೋಮಣ್ಣ ಸ್ಪಷ್ಟನೆ
ಬೆಂಗಳೂರು : ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಅವರು ಸ್ಪಷ್ಟನೆ ನೀಡಿದ್ದು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ.ಸೋಮಣ್ಣ, ನಾನು ಕಾಂಗ್ರೆಸ್ ಗೆ ಹೋಗುವ ಯಾವುದೇ ಯೋಚನೆ ಇಲ್ಲ.
ಕಾಂಗ್ರೆಸ್ ಸೇರ್ಪಡೆಯಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನನ್ನನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತೇನೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಪ್ರಧಾನಿ ಮೋದಿ, ಬೊಮ್ಮಾಯಿ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇನೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿ ನಾಯಕ, ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ.ಎಂದು ಹೇಳಿದ್ದಾರೆ.
ಮಂಗಳೂರು : ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಜೀವ ಬೆದರಿಕೆ : ದೂರು ದಾಖಲು – Vishwanews24
