ಮಂಡ್ಯ: ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿ ಎಂದು ನಟ ದರ್ಶನ್ಹೇಳಿದರು. ಬೆಳಗ್ಗೆಯಿಂದ ಮಂಡ್ಯ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಮತಯಾಚನೆ ಮಾಡುತ್ತಿದ್ದಾರೆ ದರ್ಶನ್.
ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.
ಹಲಗೂರು ಗ್ರಾಮಕ್ಕೆ ದರ್ಶನ್ ಬರುತ್ತಿದ್ದಂತೆಯೇ ಅಭಿಮಾನಿಗಳಿಂದ ಜೈಕಾರ ಕೇಳಿ ಬಂತು. ಡಿ ಬಾಸ್ ಡಿ ಬಾಸ್ ಘೋಷಣೆ ಮೊಳಗಿಸಿ ಸಂಭ್ರಮಿಸಿದ್ದಾರೆ ಅಭಿಮಾನಿಗಳು. ಬೃಹತ್ ಗುಲಾಬಿ ಹೂವಿನ ಹಾರ ಸಮರ್ಪಣೆ ಕೂಡ ಮಾಡಿದ್ದಾರೆ. ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ನೆಚ್ಚಿನ ನಟನಿಗೆ ಸ್ವಾಗತ ನೀಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…