ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಅಶ್ವತ್ಥನಾರಾಯಣ – Vishwnaews24

Featured, ರಾಜ್ಯ ನ್ಯೂಸ್

ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಅಶ್ವತ್ಥನಾರಾಯಣ

ಮಂಡ್ಯ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಇಂದು ಸಚಿವ ಅಶ್ವತ್ಥನಾರಾಯಣ ಅವರ ಹೆಸರೇಳಿ, ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಆರೋಪಿಸಲಾಗಿದ್ದಂತ ದರ್ಶನ್ ಗೌಡನನ್ನು ಸಿಐಡಿ ಬಂಧಿಸಿದೆ. ಈ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಅವರ ರಾಜೀನಾಮೆಗೂ ವಿಪಕ್ಷಗಳು ಒತ್ತಾಯಿಸಿದ್ದವು.

ನಾನ್ ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.

ನಿನ್ನೆ ಯಲಹಂಕ ನ್ಯೂ ಟೌನ್ ಪೊಲೀಸರು ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅಭ್ಯರ್ಥಿ ದರ್ಶನ್ ಗೌಡ ಎಂಬಾತನನ್ನು ಬಂಧಿಸಿದ್ದರು. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ವಿಚಾರಣೆಗೆ ಒಳಪಟ್ಟ ಸಂದರ್ಭದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಅವರ ಸಹೋದರರ ಹೆಸರನ್ನು ಹೇಳಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ವಿಪಕ್ಷದ ನಾಯಕರು ಗಂಭೀರ ಆರೋಪ ಮಾಡಿದ್ದರು. ಈ ಬಳಿಕ ಇಂದು ಬಂಧಿಸಲಾಗಿತ್ತು.

RSS ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ : ನಳೀನ್ ಕುಮಾರ್ ಕಟೀಲ್ – Vishwnaews24

Leave a Reply